ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವ ನಾಡಿನಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ
Cultural Saurabha program in Basava Nadu by the Department of Kannada and Culture
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವ ನಾಡಿನಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ
ವಿಜಯಪುರ 02; ಬಸವ ನಾಡು ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೊಂದಿರುವ ನಾಡಾಗಿದ್ದು, ಸಾಂಸ್ಕೃತಿಕ ಪರಂಪರೆ ಪೂರ್ವಿಕರ ಬಳುವಳಿ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಹೇಳಿದರು.
ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೆಪ್ಟೆಂಬರ್ 01 ರಂದು ಬಸವನ ಬಾಗೇವಾಡಿಯ ಬಸವೇಶ್ವರ ದೇವಾಲಯದ ಅಂತರಾಷ್ಟ್ರೀಯ ಶಾಲೆಯ ಶ್ರೀನಂದೀಶ್ವರ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಸವನ ಬಾಗೇವಾಡಿ ತಹಸೀಲ್ದಾರರಾದ ವಾಯ್. ಎಸ್. ಸೋಮನಕಟ್ಟಿ ಅವರು ಮಾತನಾಡಿ, ಇಂದಿನ ಯುವ ಪೀಳಿಗೆಯು ಮೊಬೈಲ್, ರೀಲ್ಸ್‌ನಂತಹ ಕೆಟ್ಟ ಸಂಸ್ಕೃತಿಯನ್ನು ಬಿಟ್ಟು ದೇಸಿಯ ಜಾನಪದ ಮತ್ತು ವಚನ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕೆಂದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಿವಕುಮಾರ ಪತ್ತಾರ ಕೊಳಲು ವಾದನ, ಮಹೇಶ್ ಭಂಟನೂರ ಸುಗಮ ಸಂಗೀತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಸವರಾಜ ಹಾರಿವಳ ರವರು ಹಂತಿಪದ, ಈರಯ್ಯ ಹಿರೇಮಠರವರು ಕಥಾ ಕೀರ್ತನಾ, ಸುನಂದಾ ಬತ್ತಾಸಿರವರು ಬಸವಣ್ಣನವರ ಕುರಿತ ನೃತ್ಯವನ್ನು ಪ್ರಸ್ತುತ ಪಡಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಾವಿದರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಪುರಸಭೆ ಅಧ್ಯಕ್ಷರಾದ ಶ್ರೀಮತಿ ಜಗದೇವಿ ಗುಂಡಳ್ಳಿ, ಬ.ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಗುರುನಾಥ ದಡ್ಡೆ, ಪುರಸಭೆ ಮುಖ್ಯಾಧಿಕಾರಿ ವಿದ್ಯಾಧರ ಕಲಾದಗಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಸವರಾಜ ಹಾರಿವಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶ್ರೀ ಬಸವೇಶ್ವರ ವೃತ್ತದಿಂದ ನಂದೀಶ್ವರ ರಂಗಮಂದಿರದವರೆಗೂ ನಡೆದ ಜಾನಪದ ಕಲಾತಂಡಗಳ ಮೆರವಣಿಗೆಯು ಕಲಾವೈಭವದಿಂದ ಜರುಗಿದ್ದು, ಅಕ್ಬರ್ ಸನದಿ ಗೊಂಬೆಕುಣಿತ, ಸಂಜೀವ ಖೋತ ಸತ್ತಿಗೆ ಕುಣಿತ, ರಮೇಶ್ ಪೂಜಾರಿ ಕರಡಿಮಜಲು ಪ್ರದರ್ಶನ ನೀಡಿದರು. ಮೆರವಣಿಗೆಯಲ್ಲಿ ಬ.ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಗುರುನಾಥ ದಡ್ಡೆ, ಪುರಸಭೆ ಅಧ್ಯಕ್ಷರಾದ ಜಗದೇವಿ ಗುಂಡಳ್ಳಿ, ಆರಕ್ಷಕ ನೀರೀಕ್ಷಕರಾದ ಗುರುಶಾಂತ ದಾಶ್ಯಾಳ ಹಾಗೂ ಇತರರು ಭಾಗವಹಿಸಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 