ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ: ಬಿ.ಎಸ್. ಮುಧೋಳ
Cultural activities are helpful in the personality development of students: B.S. Mudhola
ಲೋಕದರ್ಶನ ವರದಿ
ಮಾಂಜರಿ 11 : ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಲಿದೆ ಎಂದು ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆಯ ಎಚ್ ಆರ್ ಬಿ ಎಸ್ ಮುಧೋಳ್ ಹೇಳಿದರು
ಅವರು ಇಂದು ಸಮೀಪದ ಯಡ್ರಾವ್ ಗ್ರಾಮದಲ್ಲಿರುವ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರಸಕ್ತ ಸಾಲಿನ ಕ್ರೀಡಾ ಚಟುವಟಿಕೆ ಮತ್ತು ಸಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಸಲ ಸಮಿತಿಯ ಅಧ್ಯಕ್ಷರಾದ ಸತ್ಯಪ್ಪ ಬಿಸ್ಟೆ, ವಹಿಸಿದ್ದರು ಅತಿಥಿಯಾಗಿ ಸದಾಶಿವ ನಿಪ್ಪಾಣಿ ಕಲ್ಲಪ್ಪ ನಿಂಗನೂರು ಹಾಜರಿದ್ದರು
ನೃತ್ಯ, ಸಂಗೀತ, ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಮಕ್ಕಳನ್ನು ಸಕ್ರಿಯವಾಗಿ ತೊಡಗಿಸಿದರೆ, ಬಹುಮುಖಿಯಲ್ಲಿ ವ್ಯಕ್ತಿತ್ವ ವಿಕಸನಗೊಳ್ಳಲಿದೆ. ಆದ್ದರಿಂದ ಪೋಷಕರು ಮಕ್ಕಳನ್ನು ಪತ್ಯೇತರ ಚಟುವಟಿಕೆಯಲ್ಲಿ ತೊಡಗಿಸುವದು ಅವಶ್ಯಕವಾಗಿದೆ ಎಂದು ಬಿ ಎಸ್ ಮುಧೋಳ್ ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷ ಸತ್ಯಪ್ಪ ಬಿಸ್ಟೆ ಮಾತನಾಡಿ, ಸೃಜನಾತ್ಮಕ ಕಲಿಕೆಯಿಂದ ಮಕ್ಕಳ ವ್ಯಕ್ತಿತ್ವ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಪ್ರಸ್ತಾವಿಕವಾಗಿ ದಯಾನಂದ ಕಬ್ಬುರಿ ಮಾತನಾಡಿದರು ಈ ಕಾರ್ಯಕ್ರಮಕ್ಕೆ ರಾಜು ಸಜ್ಜನ್ನವರ್ ಶಿವರುದ್ರ ಕಾಂಬಳೆ ಧನಶ್ರೀ ಚೌಗುಲೆ ಸುಹಾಸಿನಿ ಹಿರೇಮಠ ಹಾಗೂ ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿ ಪಾಲಕ ಹಾಜರಿದ್ದರು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು 