ಏ. 15 ರಿಂದ ಶರಣ ಸಂಸ್ಕೃತಿ ಸಂಸ್ಕಾರ ಶಿಬಿರ
Culture and Sanskar Camp from April 15
ಲೋಕದರ್ಶನ ವರದಿ
ಬೆಳಗಾವಿ 25: ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿ, 8 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗಾಗಿ ಏಪ್ರಿಲ್ 15 ರಿಂದ 24 ರವರೆಗೆ 10 ದಿನಗಳ ಶರಣ ಸಂಸ್ಕೃತಿ ಸಂಸ್ಕಾರ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ತಿಳಿಸಿದ್ದಾರೆ.
ಎಳೆಯ ವಯಸಿನಲ್ಲಿಯೆ ವಿದ್ಯಾರ್ಥಿಗಳಿಗೆ ಶರಣ ಸಂಸ್ಕೃತಿ ಪರಿಚಯಿಸುವ ದೃಷ್ಟಿಯಿಂದ ಹಮ್ಮಿಕೊಂಡ ಈ ಶಿಬಿರದಲ್ಲಿ ವಚನ ಸಾಹಿತ್ಯ, ಕಾಯಕ, ದಾಸೋಹ, ಪ್ರಸಾದ, ಶಿಸ್ತು, ಸಂಸ್ಕಾರ ಹಾಗೂ ದೇಶಭಕ್ತಿಯ ಭಾವವನ್ನು ಮೂಡಿಸಲಾಗುವುದು. ಬಸವಾದಿ ಶಿವ ಶರಣರು ತಿಳಿಸಿಕೊಟ್ಟ ಮಾನವೀಯ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಲು, ತಜ್ಞರಿಂದ ಉಪನ್ಯಾಸ, ಶರಣರ ಕ್ಷೇತ್ರ ಅಧ್ಯಯನ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಈ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರದ ಮುಖ್ಯಾಂಶಗಳು:
ಸ್ಥಳ: ನಾಗನೂರು ರುದ್ರಾಕ್ಷಿ ಮಠ, ಶಿವಬಸವ ನಗರ, ಬೆಳಗಾವಿ.
ಉದ್ದೇಶ: ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು, ಶಿಸ್ತು, ಸಂಸ್ಕಾರ, ಶರಣ ಸಂಸ್ಕೃತಿ ಮತ್ತು ವಚನ ಸಾಹಿತ್ಯ ಕುರಿತು ಅರಿವು ಮೂಡಿಸುವುದು.
ವಿಷಯಗಳು: ಶರಣರ ಜೀವನ ಚರಿತ್ರೆ, ಕಾಯಕ-ದಾಸೋಹ ಮತ್ತು ಪ್ರಸಾದ, ವಚನಗಳಲ್ಲಿ ವಿಜ್ಞಾನ, ಮಾನವೀಯ ಮೌಲ್ಯಗಳು, ಪರಿಸರ ಸಂರಕ್ಷಣೆ, ದೇಶಭಕ್ತಿ, ತಂದೆ-ತಾಯಿ ಮತ್ತು ಗುರು-ಹಿರಿಯರಿಗೆ ಗೌರವ ಇತ್ಯಾದಿ.
ನೋಂದಣಿಗೆ ಕೊನೆಯ ದಿನಾಂಕ : ಏಪ್ರಿಲ್ 10, 2026.
ಪ್ರವೇಶ ಶುಲ್ಕ : ರೂ. 1,000
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 