ಕಲೆ ಉಳಿದರೆ ಮಾತ್ರ ಸಂಸ್ಕೃತಿ ಉಳಿಯುತ್ತದೆ: ಭೀಮಪ್ಪ ಹುದ್ದಾರ
Culture survives only if art survives: Bhimappa Huddar
ಬೆಳಗಾವಿ, ಜು.31: ಗ್ರಾಮೀಣ ಜಾನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವಾಳವಾಗಿದ್ದು, ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ ಎಂದು ಕರ್ನಾಟಕ ಬಯಲಾಟ ಅಕಾಡೆಮಿ ಸದಸ್ಯ ಭೀಮಪ್ಪ ಹುದ್ದಾರ ಹೇಳಿದರು.
ಗೋಕಾಕ ತಾಲೂಕಿನ ಸಾವಳಗಿ-ನಂದಗಾಂವ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗೂ ಶ್ರೀರಾಮಲಿಂಗೇಶ್ವರ ಜಾನಪದ ಕಲಾವಿದರ ಸಂಘ, ಹುಲ್ಲೋಳಿಹಟ್ಟಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ "ರಾಧಾ ನಾಟಕ" ಹಾಗೂ ಭಜನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಿರಿಯ ಕಲಾವಿದರು ತಮ್ಮ ಜೀವನವನ್ನೇ ಕಲಾಸೇವೆಗೆ ಸಮರ್ಿಸಿದ್ದಾರೆ. ಅವರ ಅನುಭವವನ್ನು ಯುವ ಕಲಾವಿದರಿಗೆ ತರಬೇತಿ ಮೂಲಕ ಹಂಚಿ, ಜಾನಪದ ಕಲೆಗಳ ಬಗ್ಗೆ ಜಾಗೃತಿ ಮೂಡಿಸಬೇಕು. "ಕಲೆ ಉಳಿದರೆ ಮಾತ್ರ ನಮ್ಮ ಸಂಸ್ಕೃತಿ ಉಳಿಯುತ್ತದೆ" ಎಂದು ಅವರು ಹೇಳಿದರು.
ರಾಜ್ಯ ಸರ್ಕಾರ ಜಾನಪದ ಕಲೆಗಳ ಸಂರಕ್ಷಣೆ ಮತ್ತು ಪ್ರೋತ್ಸಾಹಕ್ಕಾಗಿ ವಿವಿಧ ಯೋಜನೆಗಳ ಮೂಲಕ ಆರ್ಥಿಕ ನೆರವು ನೀಡುತ್ತಿದ್ದು, ಕಲಾವಿದರು ಆ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಭೀಮಪ್ಪ ಹುದ್ದಾರ ಸಲಹೆ ನೀಡಿದರು.
ಕಾರ್ಯಕ್ರಮವನ್ನು ಗ್ರಾಮದ ಹಿರಿಯ ಶ್ರೀಕಾಂತ ಶಿರಗಾಂವಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಆಗ ಮಾತ್ರ ನಮ್ಮ ಮೂಲ ಜಾನಪದ ಕಲೆಗಳು ಮುಂದಿನ ಪೀಳಿಗೆಗೆ ತಲುಪಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಶ್ರೀರಾಮಲಿಂಗೇಶ್ವರ ಜಾನಪದ ಕಲಾವಿದರ ಸಂಘ, ಹುಲ್ಲೋಳಿಹಟ್ಟಿ ತಂಡದವರಿಂದ ಪ್ರದರ್ಶಿಸಲಾದ "ರಾಧಾ ನಾಟಕ" ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಬಯಲಾಟದ ಸೊಗಸು, ಸಂಗೀತ ಹಾಗೂ ಕಲಾವಿದರ ಮನೋಜ್ಞ ಅಭಿನಯಕ್ಕೆ ಗ್ರಾಮಸ್ಥರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಕೆಂಪವ್ವಾ ಹರಿಜನ, ಬಸವರಾಜ ಶಿರಗಾಂವಿ, ಶಿವಲಿಂಗಪ್ಪ ಶಿರಗಾಂವಿ, ನಾಗಪ್ಪ ಹತ್ತರಕಿ, ಬಾಳಪ್ಪ ಸನದಿ, ಬಸಗೌಡ ಶಿರಗಾಂವಿ, ಕೆಂಪವ್ವಾ ಹತ್ತರಕಿ, ಈರಯ್ಯ ಹಿರೇಮಠ, ಗಿರೇಪ್ಪ ಅಂಗಡಿ, ಶಿವಲಿಂಗಪ್ಪ ದಂಡಿನ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 