ಬೆಳಗಾವಿ, 08: 18 ವರ್ಷ ಮೇಲ್ಪಟ್ಟ ಎಲ್ಲ ಮತದಾರರು ಮತಗಟ್ಟೆಗೆ ಹೋಗಿ ಕಡ್ಡಾಯವಾಗಿ ತಮ್ಮ ತಮ್ಮ ಮತವನ್ನು ಚಲಾಯಿಸಬೇಕೆಂದು ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಅವರು ಕರೆ ನೀಡಿದರು.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ಅಧ್ಯಕ್ಷರು ಜಿಲ್ಲಾ ಸ್ವೀಪ್ ಸಮಿತಿ ಬೆಳಗಾವಿ ಅವರ ಸಂಯುಕ್ತಾಶ್ರಯದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಾರ್ಚ 8 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಾಯರ್ಾಲಯದ ಆವರಣದಿಂದ ಬಸವೇಶ್ವರ ವೃತ್ತದವರೆಗೆ (ಗೋವಾವೇಸ್) ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳಾದ ಎಸ್.ಬಿ. ಬೊಮ್ಮನಹಳ್ಳಿ, ಬೆಳಗಾವಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ, ಹಾಗೂ ಮಾನ್ಯ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಾದ ಸಿ.ಎಚ್. ಸುಧೀರಕುಮಾರ ರೆಡ್ಡಿ ಅವರು ಸೈಕಲ್ ಜಾಥಾಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಅವರು ಮಾತನಾಡುತ್ತಾ ಜನವರಿ 1, 2019 ಕ್ಕೆ 18 ವರ್ಷ ತುಂಬಿದವರು ಹೊಸದಾಗಿ ನೋಂದಣಿ ಮಾಡಿಸಿಕೊಳ್ಳುವಂತೆ ಕರೆ ನೀಡಿದರು
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳಾದ ಪರಶುರಾಮ ದುಡಗುಂಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿದರ್ೇಶಕರಾದ ಸೀಬಿರಂಗಯ್ಯ, ಜಿಲ್ಲಾ ಪಂಚಾಯತ ಅಕ್ಷರದಾಸೋಹ ಯೋಜನೆಯ ಶಿಕ್ಷಣಾಧಿಕಾರಿಗಳಾದ ಬಸವರಾಜ ಮಿಲ್ಲಾನಟ್ಟಿ, ಸಕರ್ಾರಿ ಬಿ.ಎಡ್. ಕಾಲೇಜಿನ ಉಪನ್ಯಾಸಕರಾದ ರವಿ ಭಜಂತ್ರಿ, ಡಾಯೆಟ್ ಪ್ರಾಂಶುಪಾಲರಾದ ರವಿ ಬಳಗಾರರವರು ಹಾಗೂ ಇನ್ನಿತರರು ಉಪಸ್ಥಿತರಿದ್ದರು