ಸಿಲಿಂಡರ್ ಸ್ಫೋಟ: ಮೂವರಿಗೆ ಗಂಭೀರ ಗಾಯ

ಚಿಕ್ಕಮಗಳೂರ,  ಅ 11:    ಹೋಟೆಲ್ ಒಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರು  ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಿಂಗಟಗೆರೆ ಗ್ರಾಮದಲ್ಲಿ  ನಡೆದಿದೆ.   

ಸಿಂಗಟಗೆರೆ  ಗ್ರಾಮದ ಸುರೇಶ್ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಈ ದುರ್ಘಟನೆಯಲ್ಲಿ  ಸುರೇಶ್, ಗೀತಾಮ್ಮ, ತಿಪ್ಪೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ  ಚಿಕಿತ್ಸೆಗೆಗಾಗಿ ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ಗಾಯಾಳುಗಳನ್ನು  ರವಾನಿಸಲಾಗಿದೆ.  

ಘಟನೆಗೆ ಸಂಬಂಧಿಸಿದಂತೆ ಸಿಂಗಟಗೆರೆ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.