ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ:ಮೃತರ ಸಂಖ್ಯೆ 3ಕ್ಕೆ ಏರಿಕೆ

Cylinder explosion case in Ayyappa temple, Unakal: Death toll rises to 3

ಹುಬ್ಬಳ್ಳಿ 27: ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮತ್ತೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದು, ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಬೆಂಕಿ ಅವಘಡದಲ್ಲಿ ಗಾಯಗೊಂಡಿರುವ ಇನ್ನೂ ಆರು ಅಯ್ಯಪ್ಪ ಭಕ್ತರು ಸದ್ಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೃಹ ಸಚಿವ ಜಿ. ಪರಮೇಶ್ವರ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಆರೋಗ್ಯ ವಿಚಾರಿಸಿ, ಗಾಯಾಳುಗಳಿಗೆ ತಜ್ಞ ವೈದ್ಯರ ತಂಡದಿಂದ ಕಾಳಜಿ ವಹಿಸಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಒದಗಿಸುವಂತೆ ಮನವಿ ಮಾಡಲಾಗುವುದು ಎಂದು ಪರಮೇಶ್ವರ ಹೇಳಿದ್ದಾರೆ.