ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ
Cylinder price hike: Minister Lakshmi Hebbalkar lashes out at the Centre
ಬೆಳಗಾವಿ 01: ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ರೂ.2162ರಿಂದ ರೂ.3153ಕ್ಕೆ ಏರಿಸಿರುವುದು, ಒಟ್ಟು ರೂ.991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಪ್ರಮಾಣದ ಬೆಲೆ ಏರಿಕೆ ಹಿಂದೆ ಎಂದೂ ಕಂಡಿಲ್ಲ. ಕೆಲವು ರಾಜ್ಯಗಳ ಚುನಾವಣೆ ಮುಗಿದ ತಕ್ಷಣ ಇಂತಹ ಜನವಿರೋಧಿ ನಿರ್ಧಾರ ತೆಗೆದುಕೊಂಡಿರುವುದು ಜನರಿಗೆ ನೀಡಿದ ಭರವಸೆಗಳನ್ನೇ ಮರೆತಂತಾಗಿದೆ. ಇದು ನೇರವಾಗಿ ಹೊಟೇಲ್ ಉದ್ಯಮದ ಮೇಲೆ ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಗದಾಪ್ರಹಾರವಾಗಿದೆ ಎಂದಿದ್ದಾರೆ.
ಹೋಟೆಲ್ ಮಾಲೀಕರು ಈಗಾಗಲೇ ಬೆಲೆ ಏರಿಕೆಯ ಒತ್ತಡವನ್ನು ಎದುರಿಸುತ್ತಿದ್ದಾರೆ. ಈ ನಿರ್ಧಾರದಿಂದ ಆಹಾರ ಪದಾರ್ಥಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದೆ. ಅದರ ಪರಿಣಾಮವಾಗಿ ದಿನನಿತ್ಯ ಜೀವನ ನಡೆಸುವ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಜನರ ಜೀವನೋಪಾಯವನ್ನು ಕಷ್ಟಕರಗೊಳಿಸುವ ಬದಲು, ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಆದರೆ, ಚುನಾವಣೆಯ ಬಳಿಕ ಜನರಿಗೆ ಮತ್ತೊಮ್ಮೆ ಮೋಸ ಮಾಡುತ್ತಿರುವುದು ಸ್ಪಷ್ಟವಾಗಿದೆ. ತಕ್ಷಣವೇ ಈ ಅನ್ಯಾಯಕರ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಹಾಗೂ ಜನಪರ ನೀತಿಗಳನ್ನು ಅನುಸರಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 