ಬಳ್ಳಾರಿ,ಜು.08: ಸರಕಾರದ ಹೊಸ ಆದೇಶದ ಅನ್ವಯ ರೋಗಲಕ್ಷಣಗಳಿಲ್ಲದ ಸೋಂಕಿತರಿಗೆ ಹೋಂ ಐಸೋಲೇಶನ್ನಲ್ಲಿಡುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಕ್ರಮಕೈಗೊಳ್ಳಲಾಗುತ್ತಿದ್ದು, ಇದುವರೆಗೆ 22 ಜನರಿಗೆ ಹೋಂ ಐಸೋಲೇಶನ್ನಲ್ಲಿಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆದ ಜಿಲ್ಲಾಮಟ್ಟದ ಟಾಸ್ಕ್ಫೋಸರ್್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೋಂ ಐಸೋಲೇಶನ್ನಲ್ಲಿರುವವರ ಮೇಲೂ ನಿಗಾಯಿಡಲಾಗುತ್ತದೆ. ರೋಗಲಕ್ಷಣಗಳಿಲ್ಲದ ಸೊಂಕಿತರ ಸಂಪೂರ್ಣ ಜವಾಬ್ದಾರಿಯನ್ನು ಕೇರ್ಟೆಕರ್ಸ್ಗೆ ವಹಿಸಲಾಗುತ್ತದೆ ಎಂದು ಹೇಳಿದ ಅವರು ಆರೋಗ್ಯ ಸೇವೆ ಒದಗಿಸುವವರಿಗೆ ಹಾಗೂ ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೊರೊನಾ ಸೊಂಕು ಉಂಟಾದಲ್ಲಿ ಅವರಿಗೆ ಸರಕಾರಿ ದಂತ ಮಹಾವಿದ್ಯಾಲಯದ ಪ್ರತ್ಯೇಕ ಮಹಡಿಯೊಂದರಲ್ಲಿ ಬೆಡ್ಗಳೊಂದಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಂಟ್ಯಾಕ್ಟ್ ಟ್ರೇಸಿಂಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳ ಬದಲಿಗೆ ಬೇರೆ ಇಲಾಖೆಗಳ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ವಿವರಿಸಿದ ಡಿಸಿ ನಕುಲ್ ಅವರು ಮುಂದಿನ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ಸಂಭವಿಸಲಿರುವ ಕೊರೊನಾ ಸೊಂಕಿತರು,ಚಿಕಿತ್ಸೆ,ಬೆಡ್ ವ್ಯವಸ್ಥೆ ಸೇರಿದಂತೆ ಇನ್ನೀತರ ಸಿದ್ಧತೆಗಳ ಕುರಿತು ಅಧಿಕಾರಿಗಳೊಂದಿಗೆ ಚಚರ್ಿಸಿದರು.
ಕೊರೊನಾ ಸೋಂಕಿತರಿಗಾಗಿ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ 20 ಬೆಡ್ಗಳ ಅಗತ್ಯ ವ್ಯವಸ್ಥೆ ಹಾಗೂ ಇನ್ನೀತರ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಲಾಗಿದೆ ಎಂದರು.
ಆಂಟಿಜೇನ್ ಕಿಟ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಸುಧೀರ್ಘ ಚಚರ್ೆ ನಡೆಯಿತು.
ಈ ಸಂದರ್ಭದಲ್ಲಿ ಜಿಪಂ ಸಿಇಒ ಕೆ.ನಿತೀಶ್, ಎಸ್ಪಿ ಸಿ.ಕೆ.ಬಾಬಾ. ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ,ವಿಮ್ಸ್ ನಿದರ್ೇಶಕ ಡಾ.ದೇವಾನಂದ, ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಬಸರೆಡ್ಡಿ ಮತ್ತಿತರರು ಇದ್ದರು