ಕೆ.ಇ.ಬಿ ಸಭಾಂಗಣದಲ್ಲಿ ಡಿ.ದೇವರಾಜ ಅರಸುರವರ ಜನ್ಮ ದಿನಾಚರಣೆ
D. Devaraj Arasu' birthday celebration at KEB auditorium
ರಾಯಬಾಗ, 20 ; ಸರಳ, ಸಜ್ಜನಿಕೆಯ ಧೀಮಂತ ನಾಯಕ ಡಿ.ದೇವರಾಜ ಅರಸು ಅವರ ಜೀವನ ನಮಗೆಲ್ಲ ಆದರ್ಶಪ್ರಾಯವಾಗಿದೆ ಎಂದು ತಹಶೀಲ್ದಾರ ಸುರೇಶ ಮುಂಜೆ ಹೇಳಿದರು.
ಬುಧವಾರ ಪಟ್ಟಣದ ಕೆ.ಇ.ಬಿ ಸಭಾಂಗಣದಲ್ಲಿ ತಾಲೂಕಾ ಆಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸುರವರ 110ನೇ ಜನ್ಮ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಅರಸುರವರು ತಮ್ಮ ಅಧಿಕಾರಾವಧಿಯಲ್ಲಿ ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿ, ಜನಪರ ಆಡಳಿತ ನೀಡಿದ್ದಾರೆ.
ಅವರ ಜೀವನ ಆದರ್ಶವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನಡೆಯಬೇಕೆಂದರು. ವಕೀಲ ರಮೇಶಕುಮಾರ ಘಂಟಿ ಮಾತನಾಡಿ, ಶೋಷಿತ, ಅತೀ ಹಿಂದುಳಿದ ಮತ್ತು ತಳ ವರ್ಗದ ಜನರಿಗೆ ಅನೇಕ ಸೌಲಭ್ಯ ಕಲ್ಪಿಸುವುದರ ಮೂಲಕ ಸಾಮಾಜಿಕ ನ್ಯಾಯ ಒದಗಿಸಿದವರು ದೇವರಾಜ ಅರಸುರವರು ಸಾಮಾಜಿಕ ಕ್ರಾಂತಿಯ ಹರಿಕಾರ ಅನ್ನಿಸಿಕೊಂಡಿದ್ದಾರೆ. ಭೂಮಿಯನ್ನು ಉಳುವವನೆ ಭೂ ಒಡೆಯ ಕಾಯ್ದೆಯನ್ನು ಪರಿಣಾಮಕಾರಿ ಜಾರಿಗೆ ತಂದ ಧೀಮಂತ ನಾಯಕ ಅರಸುರವರು, ಇಂದಿಗೂ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು. ಹಿಂ.ವ.ಕಲ್ಯಾಣ ಇಲಾಖೆ ನಿವೃತ್ತ ಅಧಿಕಾರಿ ಆರ್.ಎಸ್.ಪಾಟೀಲ ಅವರನ್ನು ಸತ್ಕರಿಸಲಾಯಿತು. ಸಮಾರಂಭದಲ್ಲಿ ಪ.ಪಂ.ಅಧ್ಯಕ್ಷ ಅಶೋಕ ಅಂಗಡಿ, ಬಿಇಒ ಬಸವರಾಜಪ್ಪ ಆರ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್. ಎಮ್.ಪಾಟೀಲ, ಪಿಡಬ್ಲ್ಯುಡಿ ಎಇಇ ಆರಿ್ಬ. ಮನವಡ್ಡರ, ಜಿ.ಪಂ.ಎಇಇ ವಿ.ಆರ್, ಭಜಂತ್ರಿ, ಸುರೇಶ ಮಲಾಜ, ಎಚ್.ಎಲ್.ಪೂಜಾರಿ, ಸಿದ್ದು ಪೂಜಾರಿ, ಏಕನಾಥ ಮಾಚಕನೂರ, ಅನೀಲ ಬೊಮ್ಮನವರ, ಸೇರಿ ಇಲಾಖೆ ಸಿಬ್ಬಂದಿ, ವಿದ್ಯಾರ್ಥಿಗಳ ಇದ್ದರು.ತಾ.ಹಿಂ.ವ.ಕಲ್ಯಾಣ ಅಧಿಕಾರಿ ಕಲ್ಪನಾ ಕಾಂಬಳೆ ಸ್ವಾಗತಿಸಿದರು, ಶಿಕ್ಷಕ ಬಿ.ಎಲ್.ಘಂಟಿ ನಿರೂಪಿಸಿದರು,
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 