ಗ್ರಾಮ ಸ್ವಚ್ಛತೆ ಜಾಗೃತಿಗಾಗಿ ಡಿ.ಸಿ, ಸಿ.ಇ.ಓ. ನೇತೃತ್ವದಲ್ಲಿ ವಾಕಾಥಾನ್
ಹಾವೇರಿ: ಇಂದಿನಿಂದ ಒಂದು ತಿಂಗಳವರೆಗೆ ಜಿಲ್ಲೆಯ ಗ್ರಾಮೀಣ ಸ್ವಚ್ಛತೆ ಹಾಗೂ ಜಲರಕ್ಷಣೆಗಾಗಿ ನಡೆಯುವ "ಸ್ವಚ್ಛಮೇವ ಜಯತೆ" ಹಾಗೂ "ಜಲಾಮೃತ" ಜಾಗೃತಿ ಆಂದೋಲನಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿಗಳ ನೇತೃತ್ವದಲ್ಲಿ ವಾಕಾಥಾನ್ ಮೂಲಕ ಚಾಲನೆ ನೀಡಲಾಯಿತು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಲಾದ ವಾಕಾಥಾನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ ಅವರು ಜಂಟಿಯಾಗಿ ಚಾಲನೆ ನೀಡಿದರು.
ಜಿಲ್ಲಾ ಕ್ರೀಡಾಂಗಣದಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ನಗರದ ಪ್ರಮುಖ ಬೀದಿಗಳಲ್ಲಿ ಸ್ವಚ್ಛಮೇವ ಜಯತೆ ಹಾಗೂ ಜಲಾಮೃತ ರಕ್ಷಣೆಯ ಜಾಗೃತಿಯ ಸಂದೇಶಗಳ ಮೂಲಕ ನಡಿಗೆ ಕಾರ್ಯಕ್ರಮ ನಡೆಸಲಾಯಿತು. ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರ ನೇತೃತ್ವದಲ್ಲಿ ಸಿ.ಇ.ಓ. ಲೀಲಾವತಿ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸ್ಕೌಟ್ ಆಂಡ್ ಗೈಡ್ಸ್ ವಿದ್ಯಾಥರ್ಿಗಳು ವಾಕಾಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಲ ರಕ್ಷಣೆ ಹಾಗೂ ಸ್ವಚ್ಛತೆ ಮಹತ್ವದ ಘೋಷಣೆಗಳನ್ನು ಸಾರಿದರು.
ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸಮಾವೇಶಗೊಂಡು ಮಾನವ ಸರಪಳಿ ರಚಿಸಿ ಗ್ರಾಮಗಳ ಸ್ವಚ್ಛತೆಯ ಮಹತ್ವ, ತ್ಯಾಜ್ಯಗಳ ವ್ಯವಸ್ಥಿತ ವಿಲೇವಾರಿ, ಪರಿಸರ ರಕ್ಷಣೆ, ನೀರಿನ ಮಿತ ಬಳಕೆಯ ಕುರಿತಂತೆ ಸಂದೇಶಗಳನ್ನು ಬಿತ್ತರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಪ್ರತಿಜ್ಞಾವಿಧಿ ಬೋಧಿಸಿ, ಆರೋಗ್ಯದ ಹಿತದೃಷ್ಟಿಯಿಂದ ಬಯಲಿನಲ್ಲಿ ಮಲಮೂತ್ರಗಳನ್ನು ವಿಸಜರ್ಿಸದೆ ಶೌಚಾಲಯವನ್ನೇ ಬಳಸುತ್ತೇವೆ. ಶೌಚಾಲಯವನ್ನು ಸದಾ ಸ್ವಚ್ಛವಾಗಿಡುತ್ತೇವೆ. ನನ್ನ ಮನೆಯ ಕಸವನ್ನು ಹಸಿ ಮತ್ತು ಒಣ ಕಸವನ್ನಾಗಿ ವಿಂಗಡಿಸಿ, ವಿಲೇವಾರಿ ಮಾಡಲು ಸಹಕರಿಸುತ್ತೇವೆ. ನೀರನ್ನು ವ್ಯರ್ಥ ಮಾಡದೇ ಮಿತವಾಗಿ ಬಳಸುತ್ತೇವೆ.
ನೀರನ್ನು ಸಂರಕ್ಷಿಸಿ, ಗಿಡಗಳನ್ನು ಬೆಳೆಸುತ್ತೇವೆ. ಈ ಎಲ್ಲಾ ಕ್ರಮಗಳನ್ನು ಪಾಲಿಸುವಂತೆ ಇತರರನ್ನೂ ಪ್ರೇರೇಪಿಸುತ್ತೇನೆ. ನನ್ನ ಗ್ರಾಮವನ್ನು ಸ್ವಚ್ಛ-ಸುಂದರ ಹಾಗೂ ಆರೋಗ್ಯವಂತವಾಗಿಸಿ, ದೇಶಪ್ರೇಮಿ ನಾಗರೀಕನಾಗಿ ಸೇವೆ ಮಾಡುವುದಾಗಿ ದೃಢ ಪ್ರತಿಜ್ಞೆ ಮಾಡುವ ಪ್ರಮಾಣ ಬೋಧಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 