ಡಿ.ಕೆ. ಶಿವಕುಮಾರ್ ಜನ್ಮದಿನ: ಕನಕದುರ್ಗಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ, 2 ಸಾವಿರ ಬಡವರಿಗೆ ಉಪಹಾರ ವಿತರಣೆ

ಡಿ.ಕೆ. ಶಿವಕುಮಾರ್ ಜನ್ಮದಿನ: ಕನಕದುರ್ಗಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ, 2 ಸಾವಿರ ಬಡವರಿಗೆ ಉಪಹಾರ ವಿತರಣೆ D.K. Shivakumar's birthday: Special puja at Kanakadurgamma temple, breakfast distributed to 2,000 po

ಬಳ್ಳಾರಿ 15:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು ಹಾಗೂ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಅವರ ಜನ್ಮದಿನದ ಅಂಗವಾಗಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶುಕ್ರವಾರ ನಗರದ ವಿವಿಧ ಭಾಗಗಳಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.ನಗರದ ಗ್ರಾಮದೇವತೆ ಶ್ರೀ ಕನಕದುರ್ಗಮ್ಮ ದೇವಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಯಿತು. ಬಳಿಕ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕೇಕ್ ಕತ್ತರಿಸಿ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿದರು. ಇದೇ ವೇಳೆ ಸುಮಾರು 2 ಸಾವಿರಕ್ಕೂ ಹೆಚ್ಚು ಬಡ ಹಾಗೂ ನಿರ್ಗತಿಕರಿಗೆ ಉಪಹಾರ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ರಾಜ್ಯದ ಅಭಿವೃದ್ಧಿ ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನೆ ಬಲವರ್ಧನೆಗೆ ಡಿ.ಕೆ. ಶಿವಕುಮಾರ್ ಅವರು ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದೆ ಎಂದು ಹೇಳಿದರು. ಜನಪರ ಆಡಳಿತ, ಸಂಘಟನೆಗೆ ಹೊಸ ಚೈತನ್ಯ ಮತ್ತು ಪಕ್ಷದ ತತ್ವಗಳನ್ನು ಜನಸಾಮಾನ್ಯರ ಮಟ್ಟಿಗೆ ತಲುಪಿಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ಬಳ್ಳಾರಿ ಸಂಸದರಾದ ಈ. ತುಕಾರಾಂ, ಸಂಡೂರು ಶಾಸಕರಾದ ಅನ್ನಪೂರ್ಣಮ್ಮ, ಬುಡಾ ಅಧ್ಯಕ್ಷರಾದ ಜೆ.ಎಸ್‌. ಆಂಜನೇಯುಲು, ಮಹಾಪೌರರಾದ ಪಿ. ಗಾದೆಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುಮಾಯೂನ್ ಖಾನ್, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ್, ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ಡಿಸಿಸಿ ಕಾರ್ಯಾಧ್ಯಕ್ಷ ಬೋಯಪಾಟಿ ವಿಷ್ಣುವರ್ಧನ್,

ಉಪಾಧ್ಯಕ್ಷ ಕೆ. ಶ್ರೀನಿವಾಸಲು, ಕೆಪಿಸಿಸಿ ವಕ್ತಾರ ವೆಂಕಟೇಶ್ ಹೆಗಡೆ, ಬಗರು ಹುಕುಂ ಅಧ್ಯಕ್ಷ ತಿಮ್ಮನಗೌಡ, ತೆರೆಗೆ ನಿರ್ಧಾರಣೆ ಹಣಕಾಸು ಮತ್ತು ಅಪಿಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಕುಬೇರ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.ಅದೇ ರೀತಿ ಮಹಾನಗರ ಪಾಲಿಕೆ ಸದಸ್ಯರಾದ ಮಿಂಚು ಶ್ರೀನಿವಾಸ್, ಜಾನಕಮ್ಮ, ಸಭಾಧ್ಯಕ್ಷ ಆಸಿಫ್, ಶ್ರೀರಾಮರಾಜು, ಸರಗು ನಾಗರಾಜು, ಪ್ರಭಾಕರ್, ಜಿ.ಜೆ. ರವಿಕುಮಾರ್, ಯತೀಂದ್ರ, ಬಜ್ಜಪ್ಪ ಬುಜ್ಜಿ, ಬತ್ರಿ ಮಂಜು, ಸಮೀರ್, ವೀರನಗೌಡ ಸೇರಿದಂತೆ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ತಂದರು.ಜನ್ಮದಿನ ಅಂಗವಾಗಿ ನಡೆದ ಸೇವಾ ಚಟುವಟಿಕೆಗಳನ್ನು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.