ಮತದಾನ ಜಾಗೃತಿಗೆ ವಾಕ್ಥಾನ್- ಪ್ರತಿಜ್ಞಾವಿಧಿ ಬೋಧಿಸಿದ ಡಿಸಿ

ಹಾವೇರಿ26:  ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನದಂದು ತಪ್ಪದೇ ಮತಚಲಾಯಿಸುವಂತೆ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿಯಿಂದ ಹಾವೇರಿ ನಗರದಲ್ಲಿ ಮಂಗಳವಾರ ಬೃಹತ್ ವಾಕ್ಥಾನ್  ನಡೆಸಲಾಯಿತು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ಅವರು ಪುರಸಿದ್ದೇಶ್ವರ ದೇವಾಲಯದಲ್ಲಿ ಮತದಾನಕ್ಕಾಗಿ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ  ಆರಂಭವಾದ ವಾಕ್ಥಾನ್ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮತದಾನ ಜಾಗೃತಿಯ ವಿವಿಧ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಿಗ ಜಾಗೃತಿ ಮೂಡಿಸಿತು. ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ರಚಿಸಿ ಮತದಾನದ ಘೋಷಣೆ ಮೂಲಕ ಜಾಗೃತಿ ಮೂಡಿಸಲಾಯಿತು.

ಮತದಾನಕ್ಕಾಗಿ ನಡಿಗೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿ.ಪಂ.ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಕೆ.ಲೀಲಾವತಿ, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ನಸರ್ಿಂಗ್ ಹಾಗೂ ವಿವಿಧ ಕಾಲೇಜುಗಳ ಎನ್.ಎಸ್.ಎಸ್. ವಿದ್ಯಾಥರ್ಿಗಳು ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚುಜನ ಭಾಗವಹಿಸಿ ಸಾರ್ವಜನಿಕರ ಗಮನ ಸೆಳೆದರು.

      ಮುಂಜಾನೆ 7 ಗಂಟೆಗೆ ಆರಂಭವಾದ ಜಾಥಾ ಸಂಚರಿಸಿದ ಮಾರ್ಗದುದ್ದಕ್ಕೂ ತರಕಾರಿ, ಹೂವು ವ್ಯಾಪಾರಿಗಳು ಸೇರಿದಂತೆ ಸಾರ್ವಜನಿಕರಿಗೆ ಮತದಾನದ ಅರಿವಿನ ಕರಪತ್ರಗಳನ್ನು ವಿತರಿಸಿ ಮತದಾನದ ದಿನಾಂಕ, ಸಮಯ ಹಾಗೂ ಮತದಾನ ಮಾಡುವ ಅಶವ್ಯಕತೆಗಳನ್ನು ವಿವರಿಸುತ್ತ ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯಬೇಡಿ, ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ತಮ್ಮ ವಿವೇಚನೆಯಂತೆ ನೈತಿಕ ಮತದಾನ ಮಾಡಿ ಎಂದು ಕರೆ ನೀಡಿದರು.

   ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ರಚಿಸಿ ಮತದಾನದ ವಿವಿಧ ಘೋಷಣೆಗಳ ಮೂಲಕ ಸಾರ್ವಜನಿಕರಿಗೆ ಕರೆ ನೀಡಿದರು. ವಿದ್ಯಾಥರ್ಿಗಳು ಹಾಗೂ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ಅವರು ಮತದಾನ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಪ್ರಯಾಣಿಕರಿಗೆ ಮನವಿ: ಸಮೀಪದ  ವಾಯುವ್ಯ ಸಾರಿಗೆ ಬಸ್ ನಿಲ್ದಾಣಕ್ಕೆ ತೆರಳಿದ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ.ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳು ಪ್ರಯಾಣಿಕರಿಗೆ ಕರಪತ್ರ ನೀಡಿ ಮತದಾನ ಮಾಡುವಂತೆ  ಮನವಿಮಾಡಿಕೊಂಡರು. 

ಸೆಲ್ಫಿಗಾಗಿ ನೂಕು: ಮತದಾನ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡ ವಿದ್ಯಾಥರ್ಿಗಳು ಮಾನವ ಸರಪಳಿ ಮುಕ್ತಾಯವಾಗುತ್ತಿದ್ದಂತೆ ಜಿಲ್ಲಾಧಿಕಾರಿ ಕೃಷ್ಣಾ ಬಾಜಪೇಯಿ ಅವರೊಂದಿಗೆ ವಿದ್ಯಾಥರ್ಿ ಹಾಗೂ ವಿದ್ಯಾಥರ್ಿನಿಯರು ಸೆಲ್ಫಿಗಾಗಿ ಮುಗಿಬಿದ್ದು ಎಲ್ಲರ ಗಮನ ಸೆಳೆದರು. 

      ಮತದಾನ ಜಾಗೃತಿ ಜಾಥಾದಲ್ಲಿ  ಹಾವೇರಿ ಉಪವಿಭಾಗಾಧಿಕಾರಿ ತಿಪ್ಪೇಸ್ವಾಮಿ, ಜಿ.ಪಂ.ಉಪ ಕಾರ್ಯದಶರ್ಿ ಗೋವಿಂದಸ್ವಾಮಿ, ಸಹ ಕಾರ್ಯದಶರ್ಿ ಜಾಫರ ಸುತಾರ, ವಾತರ್ಾಧಿಕಾರಿ ಬಿ.ಆರ್.ರಂಗನಾಥ್, ಕೃಷಿ ಇಲಾಖೆ ಜಂಟಿ ನಿದರ್ೆಶಕ ಮಂಜುನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಚೈತ್ರಾ, ತಾಲೂಕು ಪಂಚಾಯತ ಕಾರ್ಯನಿವರ್ಾಹಣ ಅಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ಶಾಕೀರ ಅಹ್ಮದ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪ್ರಕಾಶ ರಾಠೋಡ, ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾಜರ್ುನ ಮಠದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕ ಆರ್.ವಿ.ಚಿನ್ನಿಕಟ್ಟಿ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಗೋಪಾಲ ಲಮಾಣಿ ಒಳಗೊಂಡಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ವಿದ್ಯಾಥರ್ಿಗಳು ಪಾಲ್ಗೊಂಡಿದ್ದರು.