ಇಂಡಿ-ಚಡಚಣ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಜಂಟಿಯಾಗಿ ಪರೀಶೀಲನೆ ನಡೆಸಿದ ಡಿಸಿ-ಸಿಇಓ
DC-CEO visited various villages in Indi-Chadchana taluk and conducted a joint inspection
ವಿಜಯಪುರ 19: ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿರುವ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಶುಕ್ರವಾರ ಜಿಲ್ಲೆಯ ಗುಂದವಾನ, ನಂದರಗಿ, ಶೀಗನಾಪುರ, ಧೂಮಕನಾಳ, ದೇವರನಿಂಬರಗಿ, ಹಾಗೂ ಜಿಗಜೇವಣಿ ಗ್ರಾಮಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಅವರು, ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ರೈತರ ಜಮೀನಿನಲ್ಲಿ ಕೆರೆ ಮತ್ತು ಹಳ್ಳದ ನೀರು ಹರಿಯುತ್ತಿರುವುದರಿಂದ ಬೆಳೆ ನಷ್ಟವಾಗಿರುವ ಕುರಿತು ವೀಕ್ಷಣೆ ನಡೆಸಿದ ಅವರು, ಬೆಳೆ ಹಾನಿ ಕುರಿತು ಸಮೀಕ್ಷೆ ಕೈಗೊಂಡು ಒಂದು ವಾರದೊಳಗೆ ಸೂಕ್ತ ವರದಿಯನ್ನು ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ. ಅನುರಾಧ ವಸ್ತ್ರದ ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ ಖಡಗೇಕರ, ತಹಶಿಲ್ದಾರರ ಸಂಜಯ್ ಇಂಗಳೆ, ಉಪ ಕೃಷಿ ನಿರ್ದೇಶಕ(ಇಂಡಿ) ಚಂದ್ರಕಾಂತ್ ಪವಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಹುಲ ಭಾವಿದೊಡ್ಡಿ, ಸಹಾಯಕ ಕೃಷಿ ನಿರ್ದೇಶಕ ಮಹದೇವಪ್ಪ ಏವೂರ್, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಅಭಿಯಂತರ ಬನಸೋಡೆ, ಬಾನಿ, ಗ್ರಾಮೀಣ ಕುಡಿಯುವ ನೀರು ್ಘ ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತ ಜಮಾದಾರ್ ಮತ್ತು ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 