ಬಾಲ್ಯ ವಿವಾಹ ತಡೆಗೆ ಜಾಗೃತಿ, ಕಾನೂನು ಅರಿವು ಮೂಡಿಸಿ ಜಿಲ್ಲಾಧಿಕಾರಿ ಡಾ.ಆನಂದ.ಕೆ
DC Dr. Anand K creates awareness and legal knowledge to prevent child marriage
ವಿಜಯಪುರ ಜುಲೈ.17: ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರೀಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಕ ಜಾರಿ ಒಳಗೊಂಡಂತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕೊಳಗಾಗಿರುವ ಮಹಿಳೆಯರಿಗೆ ಕೌನ್ಸೆಲಿಂಗ್ ಹಾಗೂ ಅಗತ್ಯ ಕಾನೂನು ನೆರವು ಒದಗಿಸುವಂತೆ ಅವರು ಸೂಚನೆ ನೀಡಿದರು.
ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸಂಬಂಧಿಸಿದ ಇಲಾಖೆಗಳು ನಿರಂತರ ಸಭೆ, ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಏರಿ್ಡಸುವ ಮೂಲಕ ಸೂಕ್ತ ಕಾನೂನು ಅರಿವು ಮತ್ತು ತಿಳುವಳಿಕೆ ಮೂಡಿಸಬೇಕು. ಈ ವಿಷಯದಲ್ಲಿ ತುಂಬಾ ಗಂಭೀರತೆಯಿಂದ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು.
ಬಾಲ್ಯವಿವಾಹ ತಡೆಗಟ್ಟುವಲ್ಲಿ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಆಡಳಿತಗಳ ಪಾತ್ರ ಬಹುಮುಖ್ಯವಾಗಿದ್ದು, ಸಮನ್ವಯವಾಗಿ ಕಾರ್ಯನಿರ್ವಹಿಸಿ, ಬಾಲ್ಯವಿವಾಹ ನಡೆಯುವ ಮುನ್ನವೇ ಪತ್ತೆ ಹಚ್ಚಿ ತಪ್ಪಿತಸ್ಥರ ಸಂಬಂಧಿಸಿದ ಪೋಷಕರು, ಬಾಲ್ಯವಿವಾಹವನ್ನು ಪ್ರೋತ್ಸಾಹಿಸುವವರ ವಿರುದ್ದ ವಿಳಂಬ ಮಾಡದೇ ಪ್ರಕರಣ ದಾಖಲಿಸಬೇಕು ಎಂದು ಅವರು ಸೂಚಿಸಿದರು.
ಬಾಲ್ಯವಿವಾಹ ಅದೊಂದು ಅಪರಾಧ. ಸಾರ್ವಜನಿಕರಿಗೆ ಸೂಕ್ತ ಕಾನೂನಿನ ಅರಿವು ನೀಡುವುದರ ಜೊತೆಗೆ ಬಾಲ್ಯವಿವಾಹ ನಡೆಯುವುದು ಕಂಡುಬಂದಲ್ಲಿ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳುವುದರ ಮೂಲಕ ಮಕ್ಕಳ ಭವ್ಯ ಭವಿಷ್ಯ ಹಾಳಾಗದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಮುಂಜಾಗ್ರತೆವಹಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಫ್ ಕೇಂದ್ರಗಳಲ್ಲಿ ಪೋಕ್ಸೋ, ಬಾಲ್ಯವಿವಾಹ, ಮಹಿಳಾ ದೌರ್ಜನ್ಯ, ಕಿರುಕುಳ ಸೇರಿದಂತೆ ವಿವಿಧ ದೌರ್ಜನ್ಯಕೊಳಗಾದವರನ್ನು ಕೌನ್ಸೆಲಿಂಗ್ ಪ್ರಕ್ರಿಯೆಗೆ ಒಳಪಡಿಸಿ, ಅವರ ಮನೋಸ್ಥೈರ್ಯ ಹೆಚ್ಚಿಸಬೇಕು. ಈ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು.ವೈದ್ಯರು, ಪೊಲೀಸ್ ಇಲಾಖೆ ಸಹಕಾರ ಒದಗಿಸಬೇಕು. ಸಂಬಂಧಿಸಿದ ಸಂತ್ರಸ್ತರ ಕುರಿತ ವಸ್ತುಸ್ಥಿತಿ ಆಗಾಗ ವರದಿ ಮಾಡಬೇಕು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ತೊಲಗಿಸಲು ಸಾರ್ವಜನಿಕರಿಗೆ ಜಾಗೃತಿ ಅವಶ್ಯವಾಗಿದ್ದು, ಈ ಬಗ್ಗೆ ನಿರಂತರ ಶಿಬಿರ, ಸಭೆ ನಡೆಸಬೇಕು. ಪ್ರಕರಣ ನಡೆದ ಸಂದರ್ಭದಲ್ಲಿ ಮಾಹಿತಿ ಒದಗಿಸಿದರೆ ಪೊಲೀಸ್ ಇಲಾಖೆಯಿಂದ ಈ ನಿಟ್ಟಿನಲ್ಲಿ ಶೀಘ್ರ ಕ್ರಮ ವಹಿಸಲಾಗುವುದು. ಸಂಬಂಧಿಸಿದ ಇಲಾಖೆಗಳು ವಾಟ್ಸಾಫ್ ಗ್ರೂಪ್ ರಚಿಸಿಕೊಂಡು ಸಮರ್ಕ ಮಾಹಿತಿಯನ್ನು ವಿನಿಮಯ ಮಾಡಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ವಿಜಯ ಆಜೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 