ವಿಧ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯಲ್ಲಿ ಡಿಸಿ ಕವಿತಾ ಎಸ್ ಮನ್ನಿಕೇರಿ ; ವಿಕಲಚೇತನ ಮುಕ್ತ ಸಮಾಜಕ್ಕೆ ಮುನ್ನೆಚ್ಚರಿಕೆ ಕ್ರಮ ಅಗತ್ಯ
DC Kavita S Mannikeri in the progress review meeting of various projects; Precautionary measures are
ವಿಜಯನಗರ (ಹೊಸಪೇಟೆ) 26: ಮಗು ಜನಿಸಿದ ನಂತರ ಅದರ ನ್ಯೂನತೆಗಳಿಗೆ ಚಿಕಿತ್ಸೆ ಹುಡುಕುವುದಕ್ಕಿಂತ, ಗರ್ಭಾವಸ್ಥೆಯಲ್ಲೇ ಮಗುವಿನ ಅಸಹಜತೆ ಬೆಳವಣಿಗೆ ಪತ್ತೆಹಚ್ಚುವ ಮೂಲಕ ವಿಕಲಚೇತನ ಮುಕ್ತ ಸಮಾಜ ನಿರ್ಮಾಣಕ್ಕೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ವಿವಿಧ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಮಗುವಿನ ಬೆಳವಣಿಗೆಯಲ್ಲಿ ಏನಾದರೂ ವ್ಯತ್ಯಾಸ ಕಂಡುಬಂದಲ್ಲಿ ಕೂಡಲೇ ವೈದ್ಯರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಮೂಢನಂಬಿಕೆಗಳಿಗೆ ಒಳಗಾಗದೆ, ವೈಜ್ಞಾನಿಕವಾಗಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಪೋಷಕರಿಗೆ ಮನವರಿಕೆ ಮಾಡಬೇಕು.
ಗರ್ಭಧಾರಣೆಯ 18 ರಿಂದ 22 ವಾರಗಳ ಅವಧಿಯಲ್ಲಿ ಮಾಡಲಾಗುವ ಅನಾಮಲಿ ಸ್ಕ್ಯಾನ್ಬಗ್ಗ ನಗರ ಸೇರಿ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಗರ್ಭದಲ್ಲಿರುವ ಮಗುವಿನ ದೈಹಿಕ ಅಥವಾ ಮಾನಸಿಕ ಅಸಹಜತೆಗಳನ್ನು ಮೊದಲೇ ಪತ್ತೆಹಚ್ಚುವುದರಿಂದ ಮುಂದಾಗುವ ಅನಾಹುತ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗರ್ಭಿಣಿಯರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ನಿರ್ದೇಶಿಸಿದರು. ಪೋಷಣ್ ಅಭಿಯಾನದಡಿ ಜಿಲ್ಲೆಯ 122182 ಫಲಾ ನುಭವಿಗಳ ಪೈಕಿ 122136 ಆಧಾರ್ ಜೋಡಣೆ ಕಾರ್ಯ ಪೂರ್ಣಗೊಳಿಸಿ ಶೇ. 99.96 ರಷ್ಟು ಆಧಾರ್ ಜೋಡಣೆ ಪ್ರಗತಿ ಸಾಧಿಸಿದೆ. ಉಳಿದ ಶೇ. 0.04 ರಷ್ಟು ಪ್ರಗತಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ತಿಳಿಸಿದ ಅವರು. ಆಪ್ನಲ್ಲಿ ಫಲಾನುಭವಿಗಳ ಮೊಬೈಲ್ ಸಂಖ್ಯೆಯನ್ನು ದೃಢೀಕರಿಸುವ ಪ್ರಕ್ರಿಯೆಯಲ್ಲಿ ಶೇ. 96.30 ರಷ್ಟು ಸಾಧನೆಯಾಗಿದೆ. ತಾಂತ್ರಿಕ ದೋಷಗಳನ್ನು ಸರಿಪಡಿಸಿಕೊಂಡು ಶೇ. 100 ಕ್ಕೆ ಹೆಚ್ಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯ 1891 ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾಗಿರುವ 3 ರಿಂದ 6 ವರ್ಷದ ಮಕ್ಕಳ ಪೈಕಿ ಶೇ.93 ರಷ್ಟು ಮಕ್ಕಳು ಸಕ್ರಿಯವಾಗಿ ಶಾಲಾ ಪೂರ್ವ ಶಿಕ್ಷಣದಲ್ಲಿ ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಕಾಲಕಾಲಕ್ಕೆ ಸರಿಯಾಗಿ ಮನೆ ಭೇಟಿ ನೀಡಬೇಕು. ತಾಯಂದಿರಿಗೆ ಮಗುವಿನ ಆರೋಗ್ಯ, ಪೌಷ್ಟಿಕ ಆಹಾರ ಮತ್ತು ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಸರ್ಕಾರದ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಮತ್ತು ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೆ ಸಕಾಲದಲ್ಲಿ ಯೋಜನೆಗಳ ತಲುಪಿಸುವ ಮೂಲಕ ಸಬಲರನ್ನಾಗಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯತೆಯಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಪೂರಕವಾಗಿ ಸ್ಪಂದಿಸಿದ ಅವರು, ಜಿಲ್ಲೆಯಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಟ್ಟಲು ಆಂತರಿಕ ದೂರು ಸಮಿತಿ ರಚಿಸಲಾಗಿದ್ದು, ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಯಾವುದೇ ದೂರು ದಾಖಲಾಗಿಲ್ಲ. ಹಾಗೆಯೇ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಸುಧಾರಿಸುವುದು, ಭ್ರೂಣಹತ್ಯೆ ತಡೆಯುವುದು ಮತ್ತು ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಸಬಲೀಕರಣ ಉತ್ತೇಜಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಆದ್ದರಿಂದ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯ ಮೊದಲ ಮಗುವಿಗೆ ರೂ.5,000 ಮತ್ತು ಎರಡನೇ ಹೆರಿಗೆಯಲ್ಲಿ ಹೆಣ್ಣು ಮಗು ಜನಿಸಿದರೆ ರೂ.6,000 ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದೆ.
ಈ ಯೋಜನೆಯು ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ಉದ್ದಿಮೆಗಳ ನೌಕರರನ್ನು ಹೊರತುಪಡಿಸಿ ಮೊದಲನೇ ಗರ್ಭಿಣಿ ಮತ್ತು ಎರಡನೇ ಹೆರಿಗೆಯಲ್ಲಿ ಹೆಣ್ಣು ಮಗು ಜನಿಸಿದ ಬಾಣಂತಿಯರಿಗೆ ಸೌಲಭ್ಯ ನೀಡಲಾಗುತ್ತದೆ. ಏಪ್ರಿಲ್ 2025 ರಿಂದ ಮಾರ್ಚ್ 2026 ರವರೆಗೆ ಜಿಲ್ಲೆಯಲ್ಲಿ ಒಟ್ಟು 8868 ಫಲಾನುಭವಿಗಳು ಈ ಯೋಜನೆಯನ್ನು ಪಡೆದಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು. ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ್ ಉಂಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಗಂಗಪ್ಪ ಸೇರಿದಂತೆ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 