ಸ್ವಚ್ಛತೆ, ಲೈಟಿಂಗ್ ವ್ಯವಸ್ಥೆಗೆ ಡಿಸಿ ತಾಕೀತು
ಹಾವೇರಿ: ಕುಡಿಯುವ ನೀರು ಪೂರೈಕೆ, ನಗರದ ನಿಯಮಿತ ಸ್ವಚ್ಛತೆ, ಹಾಳಾದ ಬೀದಿ ದೀಪಗಳನ್ನು ಸಕಾಲದಲ್ಲಿ ಅಳವಡಿಸಲು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ತಾಕೀತು ಮಾಡಿದ್ದಾರೆ.
ಗುರುವಾರ ಕುಡಿಯುವ ನೀರು ಸರಬರಾಜು ಘಟಕದ ಪ್ಲಾಂಟಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ನಿಯಮಿತವಾಗಿ ಸ್ವಚ್ಛತೆ ಹಾಗೂ ಕ್ಲೋರಿನ್ ಹಾಕಲು ಸೂಚಿಸಿದ ಅವರು ನಿಯಮಿತವಾಗಿ ನೀರು ಸರಬರಾಜಿಗೆ ಸೂಚನೆ ನೀಡಿದರು.
ನಗರದ ಬೀದಿ ದೀಪಗಳು ಹಾಳಾದರು ಸಕಾಲದಲ್ಲಿ ಅಳವಡಿಸಿರುವುದಿಲ್ಲ, ನಗರದ ಬಹುಕಡೆಗಳಲ್ಲಿ ವಿದ್ಯುತ್ ದೀಪಗಳಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿದೆ.
ಮೂರು ದಿನಗದೊಳಗಾಗಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು.
ಬೀದಿ ಸ್ವಚ್ಛತೆ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಕಾಲುವೆಗಳ ಸ್ವಚ್ಛತೆಯನ್ನು ನಿಯಮಿತವಾಗಿ ಕೈಗೊಳ್ಳುವುದು ಸಮರ್ಪಕವಾಗಿ ಕಸ ವಿಲೇವಾರಿಗೊಳಿಸುವಂತೆ ಸೂಚಿಸಿದರು.
ನಗರಸಭೆ ಕಚೇರಿಯಲ್ಲಿ ಅಧಿಕಾರಿ-ಸಿಬ್ಬಂದಿಗಳ ಸಭೆ ನಡೆಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಡತವಿಲೇವಾರಿ ಮಾಡಿ, ತೆರಿಗೆ ಸಂಗ್ರಹ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ನಗರಸಭೆಯಿಂದ ಕೈಗೊಳ್ಳಲಾದ ಕಾಮಗಾರಿಗಳ ವಿವಿಧ ಹಂತಗಳ ಕುರಿತಂತೆ ಪರಿಶೀಲನೆ ನಡೆಸಿ ಮಾಹಿತಿ ಪಡೆದು ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.ಸಭೆಯಲ್ಲಿ ಪೌರಾಯುಕ್ತ ಬಸವರಾಜ ಜಿದ್ದಿ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 