ಡಾ. ಮಹದೇವ ಬಣಕಾರ ಸಾಂಸ್ಕೃತಿಕ ಭವನ ಕಾಮಗಾರಿ ಪರೀಶೀಲಿಸಿದ ಡಿಸಿ
DC inspects the work of Dr. Mahadeva Banakara Cultural House
ಡಾ. ಮಹದೇವ ಬಣಕಾರ ಸಾಂಸ್ಕೃತಿಕ ಭವನ ಕಾಮಗಾರಿ ಪರೀಶೀಲಿಸಿದ ಡಿಸಿ
ಹಾವೇರಿ 25 : ನಗರದ ಬಸವೇಶ್ವರ ಬಡಾವಣೆಯ 3ನೇ ಅಡ್ಡ ರಸ್ತೆ ಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅನುದಾನದಡಿಯಲ್ಲಿ ರೂ. 2.00 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಾ. ಮಹದೇವ ಬಣಕಾರ ಸಾಂಸ್ಕೃತಿಕ ಭವನದ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ಭೇಟಿ ನೀಡಿ ಪರೀಶೀಲಿಸಿದರು. ಕಟ್ಟಡ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಮುಗಸಿ, ಕಟ್ಟಡದಲ್ಲಿ ಸುಸಜ್ಜಿತವಾದ ಗ್ರಂಥಾಲಯ ನಿರ್ಮಾಣಮಾಡಿ, ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ವಸ್ತುಗಳು ಗುಣಮಟ್ಟದಿಂದ ಕೂಡಿರಬೇಕು ಕಟ್ಟಡ ಮುಗಿಸುವ ಭರದಲ್ಲಿ ಕಳಪೆ ವಸ್ತುಗಳನ್ನು ಭರಿಸದಂತೆ ಎಚ್ಚರವಹಿಸಿ ನಿರ್ಮಾಣ ಮಾಡಬೇಕು ಹಾಗೂ ವಿವಿಧ ಸಂಸ್ಕೃತಿ ಕಾರ್ಯಕ್ರಮ ಹಾಗೂ ಇನ್ನಿತರೆ ಕಾರ್ಯಾಚಟುವಟಿಕೆಗಳ ಉಪಯೋಗಕ್ಕೆ ಕಟ್ಟಡ ಅನುಕೂಲವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್. ಎಫ್. ಗಾಜಿಗೌಡ್ರ , ನಗರಸಭೆ ಸದಸ್ಯರಾದ ಸಂಜೀವ ನೀರಲಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವೀರಯ್ಯ ಸ್ವಾಮಿ ಹಿರೇಮಠ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ತಿಮ್ಮೆಶಕುಮಾರ ಹಾಗೂ ಹಾಗೂ ಇತರರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 