ಬಾಗಲಕೋಟೆ: ಜಿಲ್ಲೆಯಲ್ಲಿ ಪ್ರವಾಹದಿಂದ ಕಳೆದ 20 ದಿನಗಳಿಂದ ಸಾಕಷ್ಟು ಹಾನಿಯಾಗಿ ಜನರು ಸಂಕಷ್ಟಕ್ಕೆ ಒಳಗಾಗಿದ್ದು, ಸರಕಾರದಿಂದ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ.
ಜಿಲ್ಲೆಯ ಎಲ್ಲ ತಾಲೂಕುಗಳ ಬ್ಯಾಂಕ್ಗಳಿಂದ ಪರಿಹಾರ ಧನವನ್ನು ತುತರ್ಾಗಿ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಧನ 10 ಸಾವಿರ ರೂ.ಗಳನ್ನು ಅವರ ವೈಯಕ್ತಿಕ ಖಾತೆಗಳಿಗೆ ವಗರ್ಾವಣೆ ಮಾಡಲಾಗುತ್ತಿದೆ. ಸಂತ್ರಸ್ತರ ಸದರಿ ಪರಿಹಾರ ಧನವನ್ನು ಕೆಲವು ಬ್ಯಾಂಕ್ಗಳಲ್ಲಿ ಸಾಲದ ಕಂತಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಬಾಗಲಕೋಟೆ ಸಂಸದರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿರುತ್ತಾರೆ.
ಸಂತ್ರಸ್ತರ ಖಾತೆಗಳಿಗೆ ಬಿಡುಗಡೆ ಮಾಡಿದ ಪರಿಹಾರ ಧನವನ್ನು ಯಾವುದೇ ಕಾರಣಕ್ಕೂ ಸಾಲದ ಖಾತೆಯ ಕಂತಿಗೆ ಹೊಂದಾಣಿಕೆ ಮಾಡಿಕೊಳ್ಳಬಾರದೆಂದು ಎಲ್ಲ ಬ್ಯಾಂಕ್ ವ್ಯವಸ್ಥಾಪಕರಿಗೆ ಕಟ್ಟು ನಿಟ್ಟಿನ ನಿದರ್ೇಶನ ನೀಡಿ, ಸೂಕ್ತ ಕ್ರಮವಹಿಸಲಾಗುವುದು. ತಪ್ಪಿದಲ್ಲಿ ಸಂಬಂಧಪಟ್ಟ ಬ್ಯಾಂಕ್ ವ್ಯವಸ್ಥಾಪಕರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ