ರೈತರು ಹತ್ತಿರದ ಖರೀದಿ ಕೇಂದ್ರಕ್ಕೆ ಮೆಕ್ಕೆಜೋಳ ಸರಬರಾಜು ಮಾಡಲು ಡಿಸಿ ಸೂಚನೆ
DC instructs farmers to supply maize to the nearest purchasing center
ಹಾವೇರಿ, ಜ 10 : 2025-26 ನೇ ಸಾಲಿನ ಮುಂಗಾರು ಹಂಗಾಮಿನ ಮುಂಗಾರು ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ, ಹಾವೇರಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರಾರಂಭಿಸಲಾಗಿರುವ ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದರು. ಈ ಯೋಜನೆಯಡಿಯಲ್ಲಿ ಮೆಕ್ಕೆಜೋಳ ಉತ್ಪನ್ನಗಳನ್ನು ಪ್ರಚಲಿತ ಮಾರುಕಟ್ಟೆಗಳಲ್ಲಿ ಪ್ರತಿ ಕ್ವಿಂಟಾಲ್ಗೆ ರೂ.1,900-00ಗಳ ದರದಲ್ಲಿ ವಹಿವಾಟು ಆಗುತ್ತಿರುವುದನ್ನು ಪರಿಗಣಿಸಿ, ಮಾರುಕಟ್ಟೆ ಮಧ್ಯಪ್ರವೇಶ ದರ ಪ್ರತಿ ಕ್ವಿಂಟಾಲ್ ಗರಿಷ್ಠ ರೂ.2,150-00ಗಳನ್ನು ನಿಗದಿಪಡಿಸಿದೆ.
ಅಂದರೆ ಮಾರುಕಟ್ಟೆ ಧಾರಣೆ ಪ್ರತಿ ಕ್ವಿಂಟಾಲ್ಗೆ ರೂ.1,900-00 ಅಥವಾ ಅದಕ್ಕಿಂತ ಕಡಿಮೆ ದರದಲ್ಲಿ ಮಾರಾಟವಾದರೆ ಪ್ರತಿ ಕ್ವಿಂಟಾಲ್ಗೆ ಗರಿಷ್ಟ ರೂ.250-00 ರಂತೆ ಪಾವತಿಸಲಾಗುವುದು. ಮಾರುಕಟ್ಟೆ ಧಾರಣೆ ಪ್ರತಿ ಕ್ವಿಂಟಾಲ್ಗೆ ರೂ.1,950-00 ಗಳಂತೆ ಮಾರಾಟವಾದಲ್ಲಿ ವ್ಯತ್ಯಾಸದ ಮೊತ್ತ ರೂ.200-00 ರಂತೆ ಪ್ರತಿ ಕ್ವಿಂಟಾಲ್ಗೆ ಪಾವತಿಸಲಾಗುವುದು. ಮಾರುಕಟ್ಟೆ ಧಾರಣೆ ಪ್ರತಿ ಕ್ವಿಂಟಾಲ್ಗೆ ರೂ.2,000-00 ಗಳಂತೆ ಮಾರಾಟವಾದಲ್ಲಿ ವ್ಯತ್ಯಾಸದ ಮೊತ್ತ ರೂ.150-00 ರಂತೆ ಪ್ರತಿ ಕ್ವಿಂಟಾಲ್ಗೆ ಪಾವತಿಸಲಾಗುವುದು. ಮಾರುಕಟ್ಟೆ ಧಾರಣೆ ಪ್ರತಿ ಕ್ವಿಂಟಾಲ್ಗೆ ರೂ.2,100-00 ಗಳಂತೆ ಮಾರಾಟವಾದಲ್ಲಿ ವ್ಯತ್ಯಾಸದ ಮೊತ್ತ ರೂ.50-00 ರಂತೆ ಪ್ರತಿ ಕ್ವಿಂಟಾಲ್ಗೆ ಪಾವತಿಸಲಾಗುವುದು.
ಮಾರುಕಟ್ಟೆ ಧಾರಣೆಯು ಪ್ರತಿ ಕ್ವಿಂಟಾಲ್ಗೆ ರೂ.2,150-00 ಅಥವಾ ಅದಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟವಾದಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಡುವುದಿಲ್ಲ ಎಂಬುವುದನ್ನು ರೈತರಿಗೆ ಮನದಟ್ಟು ಮಾಡಿಕೊಟ್ಟು ಈ ಯೋಜನೆ ಅಡಿ ಪ್ರತಿ ಎಕರಿಗೆ 12 ಕ್ವಿಂಟಲ್ ನಂತೆ ಫ್ರೂಟ್ ತಂತ್ರಾಂಶದ ಪ್ರಕಾರ ರೈತರು ಹೊಂದಿರುವ ಜಮೀನುಗಳ ವಿಸ್ತಾರಕ್ಕೆ ಅನುಗುಣವಾಗಿ ಪ್ರತಿ ರೈತರಿಂದ 50 ಕ್ವಿಂಟಲ್ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ಪಾವತಿಸಲಾಗುವುದು ಜಿಲ್ಲೆಯ ಎಲ್ಲ 9 ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ತೆರೆಯಲಾಗಿದೆ.
ನಂತರ ರೈತರ ಖಾತೆಗೆ ನೇರ ನಗದು ವರ್ಗಾವಣೆ ಸೌಲಭ್ಯದ ಮೂಲಕ ಹಣ ಜಮೆಯಾಗಲಿದೆ ರೈತರು ಇದರ ಸದುಪಯೋಗವನ್ನು ಪಡಿಸಿಕೊಳ್ಳುವಂತೆ ಸೂಚಿಸಿದರು.ಶಿಕಾರಿಪುರದಲ್ಲಿ ಪಶು ಆಹಾರ ಘಟಕದಲ್ಲಿ 1110 ರೈತರಿಂದ ಮೆಕ್ಕೆಜೋಳ ಖರೀದಿ ಮಾಡಲಾಗಿದೆ. ಧಾರವಾಡ 317 ರೈತರು, ಹಾಗೂ ರಾಣೇಬೆನ್ನೂರ್ ಎಪಿಎಂಸಿ ಖರೀದಿ ಕೇಂದ್ರದಲ್ಲಿ ಈ ವರೆಗೆ 254 ಜನ ರೈತರು, ಮೆಕ್ಕೆಜೋಳ ಪೂರೈಸಿದ್ದಾರೆ ಹೀಗೆ ಒಟ್ಟು 1681 ಜನ ರೈತರು ಪೂರೈಸಿರುತ್ತಾರೆ ಶಿಕಾರಿಪುರದಲ್ಲಿ ನೋಂದಣಿ ಮಾಡಿಕೊಂಡ ಜಿಲ್ಲೆಯ ರೈತರು ರಾಣೇಬೆನ್ನೂರ್ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಖರೀದಿಗೆ ಅವಕಾಶ ಕಲ್ಪಿಸಿದೆ. ನೋಂದಣಿಯಲ್ಲಿ ನಿಗದಿಪಡಿಸಿದ ಪ್ರಮಾಣದಂತೆ ರೈತರು ತಾವು ಬೆಳೆದ ಮೆಕ್ಕೆಜೋಳವನ್ನು ಹತ್ತಿರದ ಖರೀದಿ ಕೇಂದ್ರಕ್ಕೆ ಸರಬರಾಜು ಮಾಡಲು ಸೂಚಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 