ಸಾಂಕ್ರಾಮಿಕ ರೋಗ ಬಾರದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

ಸಾಂಕ್ರಾಮಿಕ ರೋಗ ಬಾರದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ DC instructs officials to take steps to prevent the spread of infectious diseases

ಗದಗ  01:  ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ  ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್ ತಿಳಿಸಿದರು.   

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ  ಡೆಂಗ್ಯೂ, ಚುಕ್ಯುನ್ ಗುನ್ಯಾ  ರೋಗಗಳ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ  ಸ್ವಚ್ಚತೆಯ ಕುರಿತು ಅರಿವು ಮೂಡಿಸಬೇಕು ಎಂದರು. 

ಸಮೀಕ್ಷಣಾಧಿಕಾರಿ ವೆಂಕಟೇಶ ರಾಠೋಡ ಮಾತನಾಡಿ  ಜಿಲ್ಲೆಯಲ್ಲಿ ಜನೆವರಿ 2025 ರಿಂದ ಜುಲೈ 2025 ರವೆಗೆ ಒಟ್ಟು 2499 ಕರುಳು ಬೇನೆ ಪ್ರಕರಣಗಳು, 2064 ಟೈಫೈಡ್ ಪ್ರಕರಣಗಳು. 22 ಹೆಪಟೈಟೀಸ್ ಹಿಎ,  61 ಡೆಂಗೀ ಪ್ರಕರಣಗಳು ವರದಿಯಾಗಿವೆ.  ಜನೆವರಿ 2025 ರಿಂದ  ಜುಲೈ 2025 ರವರೆಗೆ  ಒಟ್ಟು 206679 ಸಂಶಯಾಸ್ಪದ ಮಲೇರಿಯಾ ರಕ್ತದ ಲೇಪನಗಳನ್ನು ಸಂಗ್ರಹಿಸಿದ್ದು  ಅದರಲ್ಲಿ 3 ಖಚಿತ ಪ್ರಕರಣಗಳು  ವರದಿಯಾಗಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 5988 ನಾಯಿ ಕಡಿತ ಹಾಗೂ 926 ಇತರೇ ಪ್ರಾಣಿಗಳ ಕಡಿತ ವರದಿಯಾಗಿವೆ ಎಂದರು.  

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್‌. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಎಸ್‌.ನೀಲಗುಂದ, ಜಿಲ್ಲಾ ಆರ್‌.ಸಿ.ಎಚ್‌.ಅಧಿಕಾರಿ ಡಾ.ಮೀನಾಕ್ಷಿ,  ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕರಿಗೌಡ್ರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ವೈ.ಕೆ.ಭಜಂತ್ರಿ,  ಡಾ. ರಾಜೇಂದ್ರ ಬಸರಿಗಿಡದ, ಡಾ.ಅರುಂಧತಿ ಕುಲಕರ್ಣಿ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.