ವಿವಿಧ ರಾಜ್ಯಗಳಿಂದ ಆಗಮಿಸುವವರಿಗೆ ಸೂಕ್ತ ಕ್ವಾರಂಟೈನ್ಗಾಗಿ ಸಿದ್ಧತೆಗೆ ಡಿಸಿ ಸೂಚನೆ

ವಿಜಯಪುರ ಮೇ.10 : ಅತೀ ಹೆಚ್ಚು ಕೊರೋನಾ ಪೀಡಿತ ರಾಜ್ಯಗಳು ಮತ್ತು ಗೋವಾ ರಾಜ್ಯ ಹೊರತುಪಡಿಸಿ ಇತರೆ ರಾಜ್ಯಗಳಿಂದ ಬರುವ ಪ್ರತಿಯೊಬ್ಬರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಸೂಚನೆ ನೀಡಿದ್ದಾರೆ. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಹೊರ ರಾಜ್ಯಗಳಿಂದ ಬರುತ್ತಿರುವ ಪ್ರಯಾಣಿಕರ ಕ್ವಾರಂಟೈನ್ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಬೇರೆ ರಾಜ್ಯಗಳಿಂದ ಮಾಹಿತಿ ನೀಡದೆ ಅಥವಾ ಸುಳ್ಳು ಮಾಹಿತಿ ನೀಡಿ ಜಿಲ್ಲೆಗೆ ಪ್ರವೇಶ ಪಡೆಯುವುದರ ಜೊತೆಗೆ ಮನೆಗಳಲ್ಲಿ ಬಂದು ತಂಗಿದ್ದಲ್ಲಿ ಅಂತಹವರ ವಿರುದ್ಧ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಅದರಂತೆ ಬೇರೆ ರಾಜ್ಯಗಳಿಂದ ಬಂದವರು ಮತ್ತು ವಿಶೇಷವಾಗಿ ಐದು ರಾಜ್ಯಗಳಾದ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ತಮಿಳುನಾಡು ಮತ್ತು ದೆಹಲಿಗಳಿಂದ ಬರುವವರನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಮಾಡುವ ಜೊತೆಗೆ ತೀವ್ರ ನಿಗಾ ಇಡಲು ಅವರು ಸೂಚನೆ ನೀಡಿದ್ದಾರೆ.

ಅದರಂತೆ ಸಾಂಸ್ಥಿಕ ಕ್ವಾರಂಟೈನ್ಗಾಗಿ ವಸತಿ ಶಾಲೆಗಳು, ವಸತಿ ನಿಲಯಗಳು, ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳನ್ನು (ಸಕರ್ಾರ ಮತ್ತು ಅನುದಾನಿತ, ಅನುದಾನ ರಹಿತ) ಮೂಲಸೌಕರ್ಯಗಳೊಂದಿಗೆ ಸಿದ್ಧವಾಗಿಟ್ಟುಕೊಳ್ಳಬೇಕು. ಅದರಂತೆ ನಾಳೆಯಿಂದ ಎಲ್ಲವೂಗಳು ತೆರೆದಿಡುವಂತೆ ತಿಳಿಸಿರುವ ಅವರು ಆಯಾ ಶಾಲಾ ಮುಖ್ಯೋಪಾಧ್ಯಾಯರು, ಪಿಡಿಒಗಳು, ವಾರ್ಡನ್ಗಳು, ಗ್ರಾಮ ಲೆಕ್ಕಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಜನರಿಗೆ ಅವಶ್ಯಕವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ನಗರ ವ್ಯಾಪ್ತಿಯಲ್ಲಿ ಆಯಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಆಯಾ ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧೀಕಾರಿಗಳು, ಪಿಡಿಒಗಳು, ಶಾಲಾ ಮುಖ್ಯೋಪಾಧ್ಯಾಯರು, ವಸತಿ ನಿಲಯಗಳ ವಾರ್ಡನ್ಗಳು ಸಿದ್ಧತೆ ಮಾಡಿಕೊಳ್ಳುವುದರ ಜೊತೆಗೆ ಆಯಾ ತಹಶೀಲ್ದಾರರು, ತಾಲೂಕಾ ಪಂಚಾಯತ ಮುಖ್ಯಕಾರ್ಯನಿವರ್ಾಹಣಾಧಿಕಾರಿಗಳು, ಪೊಲೀಸ್ ಇನ್ಸ್ಪೆಕ್ಟರ್ಗಳು ಕ್ವಾರಂಟೈನ್ಗಳಿಗೆ ತಮ್ಮ ಹಂತದಲ್ಲಿ ನಿರ್ಣಯ ಕೈಗೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ.

ಎಲ್ಲ ಅಧಿಕಾರಿಗಳು ಮಾನವೀಯತೆ ನೆಲೆಯ ಮೇಲೆ, ಪರಸ್ಪರ ಸಮನ್ವಯತೆಯಿಂದ ಹಾಗೂ ಸಾಂಘಿಕರಾಗಿ ಕಾರ್ಯನಿರ್ವಹಿಸಬೇಕು. ಹೊರರಾಜ್ಯಗಳಿಂದ ಬಂದು ಕ್ವಾರಂಟೈನ್ ಆಗುವ ಪ್ರತಿಯೊಬ್ಬ ವ್ಯಕ್ತಿಯೂ ಹೊರಗೆ ಬರದಂತೆ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಕುಡಿಯುವ ನೀರು, ಊಟ, ಉಪಹಾರಗಳನ್ನು, ಅಗತ್ಯ ಸಾಮಗ್ರಿಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಅಧಿಕೃತವಾಗಿ ಮತ್ತು ಅನಧಿಕೃತವಾಗಿ ಬಂದವರ ಬಗ್ಗೆಯೂ ತೀವ್ರ ನಿಗಾ ಇಡುವಂತೆ ಅವರು ಸೂಚನೆ ನೀಡಿದರು.

   ಜಿಲ್ಲೆಯ 12 ತಾಲೂಕುಗಳಿಗೆ ತೆರಳಲಿರುವ ಈ ಪ್ರಯಾಣಿಕರಿಗಾಗಿ 40 ಬಸ್ಗಳ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ತಾಲೂಕಿಗೆ ಒಂದು ಬಸ್ ಹಾಗೂ ತಲಾ ಒಬ್ಬರು ನೋಡಲ್ ಅಧಿಕಾರಿ ನಿಯೋಜಿಸಬೇಕು. ಬಸ್ ಚಾಲಕ, ಬಸ್ ನಿವರ್ಾಹಕರು ಇರಬೇಕು. ರೈಲ್ವೈ ನಿಲ್ದಾಣದಿಂದ ಆಯಾ ತಾಲೂಕುಗಳಿಗೆ ಬಸ್ಗಳು ಈ ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ಮುಂಚೆ ಆಯಾ ತಾಲೂಕಾ ತಹಶೀಲ್ದಾರರ ಗಮನಕ್ಕೆ ತರಬೇಕು, ಆಯಾ ತಾಲೂಕು ಕೇಂದ್ರಗಳಲ್ಲಿ ಈ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಬೇಕು. 

      ವಿಜಯಪುರ ತಾಲೂಕಾ ಮತ್ತು ನಗರಕ್ಕೆ ಸಂಬಂಧಪಟ್ಟ ಪ್ರಯಾಣಿಕರಿಗೆ ನಗರ ಕೇಂದ್ರ ಬಸ್ ನಿಲ್ದಾಣದಿಂದ ಬಸ್ಗಳ ವ್ಯವಸ್ಥೆ ಮಾಡಬೇಕು. ಕ್ವಾರಂಟೈನ್ ಮತ್ತು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಪ್ರತ್ಯೇಕ ಕೌಂಟರ್ಗಳನ್ನು ಸ್ಥಾಪಿಸುವಂತೆ  ತಿಳಿಸಿದ ಅವರು 12 ಬಸ್ಗಳನ್ನು ರೈಲ್ವೈ ನಿಲ್ದಾಣದ ಹತ್ತಿರ,  8 ಬಸ್ಗಳನ್ನು ಗೋಲಗುಂಬಜ್ ಹತ್ತಿರ ಮತ್ತು ಹೆಚ್ಚುವರಿ ಬಸ್ಗಳನ್ನು ಒಳಗೊಂಡಂತೆ 20 ಬಸ್ಗಳನ್ನು ಕೇಂದ್ರ ಬಸ್ ನಿಲ್ದಾಣದಲ್ಲಿ ಸಿದ್ಧವಾಗಿಟ್ಟುಕೊಳ್ಳುವಂತೆ ಸೂಚಿಸಿ ಈ ಎಲ್ಲ ಕಾಯರ್ಾಚರಣೆ ಯೋಜನಾ ಬದ್ಧವಾಗಿ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

     ಅಧಿಕಾರಿಗಳೆಲ್ಲರು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸೂಕ್ತ ಮಾಹಿತಿ ಹಂಚಿಕೊಂಡು ಕಾರ್ಯನಿರ್ವಹಿಸಬೇಕು. ಆಯಾ ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚುವರಿಯಾಗಿ ಅವಶ್ಯಕತೆ ಬಿದ್ದಲ್ಲಿ ಸಮುದಾಯ ಭವನ, ಇತರೆ ಅಂಗನವಾಡಿಗಳಂತಹ ಕಟ್ಟಡಗಳನ್ನು ಕ್ವಾರಂಟೈನ್ಗೆ ಬಳಸಬೇಕು. ವಿಶೇಷವಾಗಿ ಆಯಾ ತಹಶೀಲ್ದಾರರು, ತಾಲೂಕಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು, ಪೊಲೀಸ್ ಇನ್ಸ್ಪೆಕ್ಟರ್ಗಳು ಕ್ವಾರಂಟೈನ್ ಸಂದರ್ಭದಲ್ಲಿ ಪ್ರಯಾಣಿಕರ ಅಧೀಕೃತ ಆಗಮದ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

   ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಅವರು ಸಾಂಸ್ಥಿಕ ಕ್ವಾರಂಟೈನ್ಗಳ ವ್ಯವಸ್ಥೆ, ಪ್ರಯಾಣಿಕರ ಮಾಹಿತಿ, ಪೊಲೀಸ್ ಸಿಬ್ಬಂದಿಗಳ ಸಮನ್ವಯತೆಗೆ ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ವಿನಿಮಯ ಮಾಡಿಕೊಳ್ಳುವಂತೆ ಸೂಚಿಸಿದರು.

ಜಿ.ಪಂ ಸಿಇಒ ಶ್ರೀ ಗೋವಿಂದ ರೆಡ್ಡಿಯವರು ಜಿಲ್ಲೆಯ ಎಲ್ಲ ಶಾಲೆಗಳ ಮುಖ್ಯೋಪಾಧ್ಯಾಯರು ಕೇಂದ್ರ ಸ್ಥಾನದಲ್ಲಿದ್ದು, ತಾಲೂಕಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪಿಡಿಒಗಳು, ಗ್ರಾಮ ಲೆಕ್ಕಾಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಕ್ವಾರಂಟೈನ್ಗೆ ಮೂಲ ಸೌಕರ್ಯಗಳು ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕು. ಬಿಆರ್ಸಿ ಮತ್ತು ಸಿಆರ್ಸಿ ಅವರು ಅವಶ್ಯಕ ಮಾಹಿತಿಯನ್ನು ಕಾಲಕಾಲಕ್ಕೆ ಒದಗಿಸುವಂತೆ ಸೂಚನೆ ನೀಡಿದರು. 

     ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒ, ಜಿಲ್ಲಾ ಎಸ್ಪಿ ಅವರು ಇಂದು ನಗರದ ರೈಲ್ವೈ ನಿಲ್ದಾಣಕ್ಕೆ ಭೇಟಿ ನೀಡಿ ನಾಳೆ ಬರಬಹುದಾದ ಪ್ರಯಾಣಿಕರ ಕುರಿತಂತೆ ಮುನ್ನೆಚ್ಚರಿಕೆಯಾಗಿ ಕೈಗೊಳ್ಳಬೇಕಾದ ಅವಶ್ಯಕ ಸಿದ್ಧತೆಗಳ ಬಗ್ಗೆ ಪರಿಶೀಲಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಹಷರ್ಾ ಶೆಟ್ಟಿ, ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಗಂಗಾಧರ ಹಾಗೂ ಇತರರು ಉಪಸ್ಥಿತರಿದ್ದರು.