ವಿಶೇಷ ನೀರಿನ ಪರೀಕ್ಷೆ ಅಭಿಯಾನಕ್ಕೆ ಡಿಸಿ ಅದ್ಧೂರಿ ಚಾಲನೆ : ಗ್ರಾಮೀಣ ಭಾಗದ ಪ್ರತಿ ಮನೆಗೂ ಶುದ್ಧ ನೀರು ಪೂರೈಕೆ
DC launches special water testing campaign: Supply of clean water to every household in rural areas
ವಿಜಯನಗರ(ಹೊಸಪೇಟೆ) 25: ಗ್ರಾಮೀಣ ಪ್ರದೇಶದ ಸಾರ್ವಜನಿಕರ ಆರೋಗ್ಯ ರಕ್ಷಣೆ ಮತ್ತು ಪ್ರತಿಯೊಬ್ಬರಿಗೂ ಸುರಕ್ಷಿತ ಕುಡಿಯುವ ನೀರನ್ನು ಖಾತರಿಪಡಿಸುವ ಮಹತ್ತರ ಉದ್ದೇಶದಿಂದ ವಿಶೇಷ ನೀರಿನ ಪರೀಕ್ಷೆಯ ಅಭಿಯಾನ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಚಾಲನೆ ನೀಡಿದರು. ನಗರದ ತಾಲೂಕು ಪಂಚಾಯತಿಯ ವಿದ್ಯಾರಣ್ಯ ಸಭಾಂಗಣದಲ್ಲಿ ಸೋಮವಾರ ವಿಶೇಷ ನೀರಿನ ಪರೀಕ್ಷೆಯ ಅಭಿಯಾನಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಅಧಿಕೃತವಾಗಿ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಮೇ 25 ರಿಂದ ಜೂನ್ 10 ರವರೆಗೆ ಜಿಲ್ಲಾದ್ಯಂತ ಈ ವಿಶೇಷ ಆಂದೋಲನ ನಡೆಯಲಿದ್ದು, ಮೊದಲ ಕುಡಿಯುವ ನೀರಿನ ಗುಣಮಟ್ಟದ ಕುರಿತು ಗ್ರಾಮೀಣ ಮಟ್ಟದಲ್ಲೇ ನಿರಂತರ ನಿಗಾ ವಹಿಸುವುದು ಅತ್ಯಗತ್ಯ. ಮಳೆಗಾಲದ ಆರಂಭದ ಈ ದಿನಗಳಲ್ಲಿ ನೀರಿನ ಮೂಲಗಳು ಕಲುಷಿತಗೊಳ್ಳುವ ಸಾಧ್ಯತೆ ಹೆಚ್ಚಿರುವುದರಿಂದ, ಜಲಮೂಲ ಕಲುಷಿಗೊಳ್ಳದಂತೆ ಎಚ್ಚರವಹಿಸಬೇಕು. ಪ್ರತಿಯೊಂದು ಗ್ರಾಮ ಪಂಚಾಯತಿಯೂ ತಮಗೆ ನೀಡಿರುವ ಕಿಟ್ಗಳನ್ನು ಸಮರ್ಕವಾಗಿ ಬಳಸಿ, ನಿಯಮಿತವಾಗಿ ನೀರಿನ ಗುಣಮಟ್ಟವನ್ನು ತಪಾಸಣೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಾಂಕ್ರಾಮಿಕ ರೋಗ ಮುಕ್ತ ಗ್ರಾಮವೇ ನಮ್ಮ ಗುರಿ:
ಅಶುದ್ಧ ಹಾಗೂ ಕಲುಷಿತ ನೀರಿನ ಸೇವನೆಯಿಂದ ಗ್ರಾಮೀಣ ಭಾಗದಲ್ಲಿ ಹರಡುವ ಕಾಲರಾ, ಕಾಮಾಲೆ, ಅತಿಸಾರ ಭೇದಿಯಂತಹ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅತ್ಯಗತ್ಯ ಎಂದ ಅವರು, ಗ್ರಾಮದ ಜಲಮೂಲಗಳಲ್ಲಿ ಕ್ಲೋರಿನೇಷನ್ ಪ್ರಕ್ರಿಯೆಯನ್ನು ಸರಿಯಾದ ಪ್ರಮಾಣದಲ್ಲಿ ನಿರ್ವಹಿಸುವಂತೆ ಮತ್ತು ಶುದ್ಧ ಕುಡಿಯುವ ನೀರಿನ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ತಿಳಿಸಿದರು.
ತಾಲೂಕಿನ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ನೀರು ಸರಬರಾಜು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಹಾಗೂ ಪ್ರಮುಖವಾಗಿ ಪ್ರತಿದಿನ ನೀರು ಸರಬರಾಜು ಮಾಡುವ ನೀರು ಗಂಟಿಗಳಿಗೆ ಕಾರ್ಯಕ್ರಮದಲ್ಲಿ ವಿಶೇಷ ನೀರಿನ ಪರೀಕ್ಷೆಯ ಕಿಟ್ ವಿತರಿಸಲಾಯಿತು.
ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಹಿರಿಯ ರಸಾಯನ ತಜ್ಞರು ಇಡೀ ತರಬೇತಿಯನ್ನು ಅತ್ಯಂತ ಪ್ರಾಯೋಗಿಕವಾಗಿ ನಡೆಸಿಕೊಟ್ಟರು. ಕಿಟ್ ಬಳಸಿ ನೀರಿನಲ್ಲಿರುವ ಫ್ಲೋರೈಡ್, ನೈಟ್ರೇಟ್, ಕ್ಲೋರೈಡ್ ಹಾಗೂ ಗಡಸುತನದ ಪ್ರಮಾಣವನ್ನು ಸ್ಥಳದಲ್ಲೇ ಪತ್ತೆ ಹಚ್ಚುವುದು ಹೇಗೆ ಎಂದು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಆಲಂ ಭಾಷ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ವಿಜಯ್ ಕುಮಾರ್ , ಕಿರಿಯ ಅಭಿಯಂತರ ಸುರೇಶ್, ನರೇಶ್. ಸಹಾಯಕ ಅಭಿಯಂತರರು ಮಹರುದ್ರಗೌಡ, ಹಿರಿಯ ರಸಾಯನ ತಜ್ಞರು ಅರುಣ್ ಕುಮಾರ್. ಜಿ. ವಿ ಇದ್ದರು
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 