ಹೆಡಿಗ್ಗೊಂಡ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಡಿಸಿ ಶ್ರಮದಾನ
ಹಾವೇರಿ: ಬ್ಯಾಡಗಿ ತಾಲೂಕು ಹೆಡಿಗ್ಗೊಂಡ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿರುವ ಕೆರೆ ಹೂಳೆತ್ತುವ ಕಾಮಗಾರಿ ಕಾರ್ಯದಲ್ಲಿ ಶ್ರಮದಾನ ಮಾಡುವುದರ ಮೂಲಕ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿ.ಪಂ.ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ ಹಾಗೂ ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ ಸಾರ್ವಜನಿಕರಲ್ಲಿ ಜಲಜಾಗೃತಿ ಕುರಿತಂತೆ ಅರಿವು ಮೂಡಿಸಿದರು.
ಹೆಡಿಗ್ಗೊಂಡ ಗ್ರಾಮದ ದೇವಸ್ಥಾನಕ್ಕೆ ಹೊಂದಿಕೊಂಡಂತಿರುವ ಕೆರೆಯ ಹೂಳೆತ್ತುವ ಕೆಲಸದಲ್ಲಿ ತೊಡಗಿರುವ ಉದ್ಯೋಗ ಖಾತ್ರಿ ಕೂಲಿಕಾರರೊಂದಿಗೆ ಪಿಕಾಸಿ ಹಿಡಿದು ಮಣ್ಣನ್ನು ಅಗಿದ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ ಕೂಲಿಕಾರರ ಬುಟ್ಟಿಗೆ ಮಣ್ಣನ್ನು ತುಂಬಿ ತಲೆಮೇಲಿರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ ಅವರು ಮಹಿಳಾ ಕೂಲಿಕಾರರೊಂದಿಗೆ ತಲೆಯಮೇಲೆ ಮಣ್ಣಿನ ಬುಟ್ಟಿಹೊತ್ತು ಮಹಿಳೆಯರೊಂದಿಗೆ ಹೆಜ್ಜೆಹಾಕಿದರು. ಅಧಿಕಾರಿಗಳು, ಜನಪ್ರತಿನಿಧಿಗಳು ಶ್ರಮದಾನದಲ್ಲಿ ತೊಡಗಿಸಿಕೊಂಡದ್ದನ್ನು ಕಂಡ ಗ್ರಾಮಸ್ಥರು ಹಾಗೂ ಉದ್ಯೋಗ ಖಾತ್ರಿ ಕೂಲಿಕಾರರು ಸಂಭ್ರಮದಿಂದ ಶ್ರಮದಾನದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಉದ್ಯೋಗ ಖಾತ್ರಿ ಕೂಲಿಕಾರರೊಂದಿಗೆ ಸಂವಾದ ನಡೆಸಿ ಸಕಾಲಕ್ಕೆ ಕೂಲಿ ಹಣ ಪಾವತಿಯಾಗುತ್ತಿರುವ ಬಗ್ಗೆ ಹಾಗೂ ಕೂಲಿ ಕೆಲಸ ದೊರೆಯುತ್ತಿರುವ ಕುರಿತಂತೆ ಮಾಹಿತಿ ಪಡೆದರು.
ಶ್ರಮದಾನದಲ್ಲಿ ಭಾಗವಹಿಸಿದ ಅನುಭವವನ್ನು ಮಾಧ್ಯಮದವರೊಂದಿಗೆ ಹಂಚಿಕೊಳ್ಳುತ್ತಾ, ನನಗೆ ಅತ್ಯಂತ ಖುಷಿಯಾಗಿದೆ. ಶ್ರಮದ ಅರಿವಾಗಿದೆ, ಮೊದಲ ಅನುಭವ ಇದು, ಬಹಳ ಒಳ್ಳೆಯ ಯೋಜನೆ ಇದು. ಹೂಳೆತ್ತುವುದರಿಂದ ಮಳೆಗಾಲದಲ್ಲಿ ನೀರು ಸಂಗ್ರಹವಾಗಿ ಬೇಸಿಗೆಯ ಏಳೆಂಟು ತಿಂಗಳವರೆಗೆ ನೀರಿನ ಸಮಸ್ಯೆ ಪರಿಹಾರವಾಗುವುದು ಎಂದು ಹೇಳುತ್ತ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 10 ಲಕ್ಷ ರೂ. ವೆಚ್ಚದಲ್ಲಿ ಹೆಡಿಗ್ಗೊಂಡ ಕೆರೆಯ ಹೂಳೆತ್ತುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ನಾಲ್ಕು ತಿಂಗಳೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ ಅವರು ಮಾತನಾಡಿ, 2019ರ ವರ್ಷವನ್ನು ಜಲವರ್ಷ ಎಂದು ಆಚರಿಸಲಾಗುತ್ತಿದೆ. ಈ ವರ್ಷ ಪ್ರತಿ ಗ್ರಾಮ ಪಂಚಾಯತಿಗೆ 500 ಸಸಿಗಳನ್ನು ನೆಡುವುದರ ಮೂಲಕ ಹಸರೀಕರಣಕ್ಕೆ ಚಾಲನೆ ನೀಡಲಾಗುವುದು. ಜಲಸಂಗ್ರಹ, ಜಲಮೂಲಗಳ ಪುನಶ್ಚೇತನ ಹಾಗೂ ನೀರಿನ ಮಿತ ಬಳಕೆ ಕುರಿತಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಇದರೊಂದಿಗೆ ಸ್ವಚ್ಛಮೇವ ಜಯತೆ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯಲ್ಲಿ ಗ್ರಾಮಗಳ ಸ್ವಚ್ಛತೆಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ 17 ಗ್ರಾಮ ಪಂಚಾಯತಿಯಲ್ಲಿ ಮೊದಲ ಹಂತವಾಗಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಲಾಗಿದೆ. ಹಸಿ ಕಸ ಮತ್ತು ಒಣ ಕಸ ವಿಂಗಡಿಸಿ ಒಣ ಕಸವನ್ನು ಗ್ರಾಮಸ್ಥರಿಂದ ಸಂಗ್ರಹಿಸಿ ವ್ಯವಸ್ಥಿತವಾಗಿ ವಿಲೇವಾರಿ ಮಾಡಲಾಗುತ್ತಿದೆ. ಜಲಾಮೃತ ಹಾಗೂ ಸ್ವಚ್ಛಮೇವ ಜಯತೆ ಕಾರ್ಯಕ್ರಮ ಅಂಗವಾಗಿ ಶ್ರಮದಾನದ ಮೂಲಕ ಗ್ರಾಮಸ್ಥರಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ ಮಾತನಾಡಿ, ಜಿಲ್ಲೆಯಲ್ಲಿ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಅಂತರ್ಜಲ ಹೆಚ್ಚಳಕ್ಕಾಗಿ ಜಿಲ್ಲೆಯಾದ್ಯಂತ ಕೆರೆಗಳ ಹೂಳೆತ್ತುವ ಕಾಮಗಾರಿಯನ್ನು ಉದ್ಯೋಗಖಾತ್ರಿಯಡಿ ಕೈಗೊಳ್ಳಲಾಗಿದೆ. ಹೆಡಿಗ್ಗೊಂಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 10ಕ್ಕೂ ಕೆರೆಗಳ ಹೂಳು ತೆಗೆಯುವ ಕಾಮಗಾರಿ ಕೈಗೊಳ್ಳಲಾಗಿದೆ. ಚೆಕ್ ಡ್ಯಾಂ ನಿಮರ್ಾಣ, ನೀರು ಇಂಗಿಸುವ ಗುಂಡಿ ಹಾಗೂ ನೀರು ಸಂಗ್ರಹಣಗಳ ಪುನಶ್ಚೇತನ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.
ಶ್ರಮದಾನದಲ್ಲಿ ಜಿ.ಪಂ.ಸದಸ್ಯ ಮುನಾಫಸಾಬ ಯಲಿಗಾರ, ಗ್ರಾಮ ಪಂಚಾಯತಿ ಅಧ್ಯಕ್ಷ , ಕೃಷಿ ಇಲಾಖೆ ಜಂಟಿ ನಿದರ್ೆಶಕ ಮಂಜುನಾಥ, ಜಿ.ಪಂ.ಸಹಾಯಕ ಕಾರ್ಯದಶರ್ಿ ಜಾಫರ ಸುತಾರ, ವಯಸ್ಕರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಗೋಪಾಲ ಲಮಾಣಿ, ಸಮಾಜ ಕಲ್ಯಾಣಾಧಿಕಾರಿ ಶ್ರೀಮತಿ ಚೈತ್ರಾ, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿ ಅಂದಾನೆಪ್ಪ ವಡಗೇರಿ, ಜಿಲ್ಲಾ ಪಂಚಾಯತ್ ಸಿಪಿಒ ಬಂಡಿವಡ್ಡರ, ಜಿಲ್ಲಾ ಪಂಚಾಯತ್ ಯೋಜನಾ ನಿದರ್ೆಶಕ ಪರಮೇಶ್ವರ ಹುಬ್ಬಳ್ಳಿ, ಬ್ಯಾಡಗಿ ತಾ.ಪಂ.ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಪರಶುರಾಮ ಪೂಜಾರ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ರಮೇಶ ಒಳಗೊಂಡಂತೆ ವಿವಿಧ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 