ಸಂತ್ರಸ್ತರ ನೆರವಿಗೆ ಬಿಡಿಸಿಸಿ ಬ್ಯಾಂಕ್ ನೆರವು

ಬಾಗಲಕೋಟೆ13: ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಸಂತ್ರಸ್ತರ ನೆರವಿಗಾಗಿ ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಲಕ್ಷ ರೂ.ಗಳ ಚೆಕ್ನ್ನು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅವರಿಗೆ ಹಸ್ತಾಂತರಿಸಲಾಯಿತು. ಇದೇ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ,  ಉಪಾಧ್ಯಕ್ಷ ಶಿವಾನಂದ ಉದಪುಡಿ ಸೇರಿದಂತೆ ಬ್ಯಾಂಕಿನ ವ್ಯವಸ್ಥಾಪಕ ನಿದರ್ೇಶಕರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.