ರನ್ನ ಬೆಳಗಲಿಯಲ್ಲಿ ಡಿ ಸಿ ಸಿ ಬ್ಯಾಂಕ್ ಉದ್ಘಾಟನೆ
DCC Bank inaugurated in Ranna Belagali
ರನ್ನ ಬೆಳಗಲಿ 06: ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್‌ನ ನೂತನ ಶಾಖೆಯನ್ನು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಆರಿ್ಬ. ತಿಮ್ಮಾಪೂರ ಸಾಹೇಬರು ಉದ್ಘಾಟಿಸಿದರು. ಈ ಕಾರ್ಯಕ್ರಮವು ಗ್ರಾಮೀಣ ಭಾಗದಲ್ಲಿ ಬ್ಯಾಂಕಿಂಗ್ ಸೌಲಭ್ಯಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಮಹತ್ವದ ಮೈಲುಗಲ್ಲಾಗಿದೆ.ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಹಾಗು ಬಿಡಿಸಿಸಿನ ಬ್ಯಾಂಕಿನ ನಿರ್ದೇಶಕರಾದ ಆರ್ ಎಸ್ ತಳೆವಾಡ ಸಹಯೋಗದೊಂದಿಗೆ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ್, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕಿವಡಿ, ಮುಧೋಳ ತಾಲೂಕಾ ಎಪಿಎಂಸಿ ಅಧ್ಯಕ್ಷ ಸಂಗಪ್ಪ ಇಮ್ಮನ್ನವರ, ಪಿಕೆಪಿಎಸ್ ಅಧ್ಯಕ್ಷ ಪ್ರವೀಣ ಪಾಟೀಲ್, ಕಾಂಗ್ರೆಸ್ ಮುಖಂಡರಾದ ಈರ್ಪ ಕಿತ್ತೂರ ಮತ್ತು ಸಂಗಪ್ಪ ಅಮಾತಿ, ಪಟ್ಟಣ ಪಂಚಾಯಿತಿ ಅಧ್ಯಕ್ಷರು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಸಚಿವರು ತಮ್ಮ ಭಾಷಣದಲ್ಲಿ ಗ್ರಾಮೀಣ ಅಭಿವೃದ್ಧಿಗೆ ಬ್ಯಾಂಕಿಂಗ್ ಸೇವೆಗಳ ಮಹತ್ವವನ್ನು ಒತ್ತಿ ಹೇಳಿದರು.ಬ್ಯಾಂಕ್ ಉದ್ಘಾಟನೆಯ ನಂತರ, ಸಚಿವರು ರನ್ನ ಬೆಳಗಲಿ ಗ್ರಾಮದಲ್ಲಿ ಜಗದಾಳ ರಸ್ತೆ ಕೂಡುವ ದಾರಿಯ ಸುಧಾರಣಾ ಕಾಮಗಾರಿಗೆ ಚಾಲನೆ ನೀಡಿದರು. ಈ ಕಾಮಗಾರಿಯು ಸ್ಥಳೀಯರಿಗೆ ಸುಗಮ ಸಂಚಾರ ಸೌಲಭ್ಯವನ್ನು ಒದಗಿಸಲಿದ್ದು, ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ ಭಾಗವಾಗಿದೆ.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತದ ನೂತನ ಕಸ ವಿಲೇವಾರಿ ವಾಹನಗಳನ್ನು ಸಚಿವರು ಉದ್ಘಾಟಿಸಿದರು. ಈ ವಾಹನಗಳು ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತಾ ಅಭಿಯಾನಕ್ಕೆ ಬಲ ನೀಡಲಿವೆ ಎಂದು ಸಚಿವರು ಹೇಳಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 