ಬೆಂಗಳೂರು, ಮಾ 13, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ಇಂದು ಮುಂಜಾನೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಈ ಅಪಘಾತದಲ್ಲಿ ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ನೆಲಮಂಗಲದ ಯಂಟಗಾನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಮುಂಜಾನೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ಹೋಗುತ್ತಿದ್ದ ಕಾರು ಮತ್ತು ಹಾಸನದಿಂದ ಬೆಂಗಳೂರಿನಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬಡಿದಿದೆ ಎಂದೂ ಪೊಲೀಸರು ಹೇಳಿದ್ದಾರೆ .