ಆಗಸ್ಟ್ 2 ರಿಂದ 12ರ ವರೆಗೆ ಡಿ.ಇಎಲ್.ಇಡಿ ಪರೀಕ್ಷೆಗಳು: ನಿಷೇದಾಜ್ಞೆ ಜಾರಿ
DELED exams from August 2 to 12: Prohibitory order imposed
ಕೊಪ್ಪಳ 25 : ಡಿ.ಇಎಲ್.ಇಡಿ ಪರೀಕ್ಷೆಗಳು ಆಗಸ್ಟ್ 2 ರಿಂದ ಆ.12ರ ವರೆಗೆ ಮುನಿರಾಬಾದ್‌ನಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸುರೇಶ ಬಿ. ಹಿಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.
ಡಿ.ಇಎಲ್.ಇಡಿ ಪರೀಕ್ಷೆಗಳು ಆಗಸ್ಟ್ 2 ರಿಂದ ಆ.12ರ ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುನಿರಾಬಾದ್‌ನಲ್ಲಿರುವ ಕೊಪ್ಪಳ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪಿ.ಎಸ್.ಟಿ.ಇ ವಿಭಾಗದಲ್ಲಿ ಜರುಗಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 