ಬಳ್ಳಾರಿಗೆ ಡಿಜಿಪಿ ಡಾ.ಎಂ.ಎ. ಸಲೀಂ ಭೇಟಿ, ಅಧಿಕಾರಿಗಳೊಂದಿಗೆ ಸಭೆಭ್ರಷ್ಟಾಚಾರ ಮುಕ್ತ ಸೇವೆಗೆ ಕರೆ
DGP Dr. M.A. Salim visits Ballari, meets officials, calls for corruption-free service
ಬಳ್ಳಾರಿ 07: ಸಾರ್ವಜನಿಕರೊಂದಿಗೆ ಸ್ನೇಹಪರವಾಗಿದ್ದುಕೊಂಡು, ಭ್ರಷ್ಟಾಚಾರ ಮುಕ್ತ ಮತ್ತು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಹಾಗೂ ಮಹಾನೀರೀಕ್ಷಕರಾದ ಡಾ.ಎಂ.ಎ. ಸಲೀಂ ಅವರು ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವಿಮರ್ಶನಾ ಸಭೆ ನಡೆಸಿ ಅವರು ಮಾತನಾಡಿದರು.ಇಲಾಖೆಗೆ ಹೊಸದಾಗಿ ಸೇರೆ್ಡಯಾಗುತ್ತಿರುವ ಕಿರಿಯ ಅಧಿಕಾರಿಗಳಿಗೆ ಹಿರಿಯರು ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಅವರ ವೃತ್ತಿ ಕೌಶಲ್ಯವನ್ನು ಹೆಚ್ಚಿಸಬೇಕು ಎಂದು ಕಿವಿಮಾತು ಹೇಳಿದರು.ಆಧುನಿಕ ಕಾಲಘಟ್ಟದಲ್ಲಿ ಅಪರಾಧ ತಡೆಗೆ ತಂತ್ರಜ್ಞಾನದ ಪಾತ್ರ ದೊಡ್ಡದಿದೆ. ಪೊಲೀಸ್ ವ್ಯವಸ್ಥೆಯಲ್ಲಿ ಅಳವಡಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ಕುರಿತು ಸಿಬ್ಬಂದಿಗಳು ಸೂಕ್ತ ತರಬೇತಿ ಪಡೆಯಬೇಕು.
ಪ್ರಕರಣಗಳ ತನಿಖೆಯಲ್ಲಿ ಈ ತಂತ್ರಜ್ಞಾನವನ್ನು ಸಮರ್ಕವಾಗಿ ಬಳಸಿಕೊಳ್ಳುವ ಮೂಲಕ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಅವರು ನಿರ್ದೇಶನ ನೀಡಿದರು.*ಪೊಲೀಸ್ ವಸತಿ ಗೃಹಗಳಿಗೆ ಭೇಟಿ:*ಸಭೆಯ ನಂತರ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಹಾಗೂ ಮಹಾನೀರೀಕ್ಷಕರಾದ ಡಾ.ಎಂ.ಎ. ಸಲೀಂ ಅವರು ಡಿ.ಎ.ಆರ್ ಪೊಲೀಸ್ ವಸತಿ ಗೃಹಗಳ ಸಂಕೀರ್ಣಕ್ಕೆ ಭೇಟಿ ನೀಡಿ, ಅಲ್ಲಿ ವಾಸಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಕುಟುಂಬದವರ ಕುಂದುಕೊರತೆಗಳನ್ನು ಆಲಿಸಿದರು. ಇದಾದ ಬಳಿಕ ಬಳ್ಳಾರಿ ನಗರದ ಬ್ರೂಸ್‌ಪೇಟೆ ಪೊಲೀಸ್ ಠಾಣೆಗೂ ಭೇಟಿ ನೀಡಿ ಪರೀಶೀಲನೆ ನಡೆಸಿದರು.ಈ ವೇಳೆ ಬಳ್ಳಾರಿ ವಲಯ ಪೊಲೀಸ್ ಉಪ ಮಹಾನೀರೀಕ್ಷಕರಾದ ಡಾ.ಹರ್ಷ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಸುಮನ್ ಡಿ.ಪೆನ್ನೇಕರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ನವೀನ್ ಕುಮಾರ್ ಸೇರಿದಂತೆ ಡಿಎಸ್‌ಪಿ ಅಧಿಕಾರಿಗಳು ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 