ಬಾಗಲಕೋಟೆ: ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ಹಮ್ಮಿಕೊಂಡ ಸರಕಾರದ ವಿವಿಧ ಯೋಜನೆಗಳ ಕುರಿತು ಮೂರು ದಿನಗಳ ವಸ್ತು ಪ್ರದರ್ಶನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಚಾಲನೆ ನೀಡಿದರು.
ಶುಕ್ರವಾರ ಬನಶಂಕರಿದೇವಿ ಜಾತ್ರೆಯಲ್ಲಿ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸರಕಾರ ಅಭಿವೃದ್ಧಿಪರ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು,
ಈ ಯೋಜನೆಗಳ ಮಾಹಿತಿಯನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಂತಹ ಜನನಿಬೀಡ ಸ್ಥಳದಲ್ಲಿ ಹಮ್ಮಿಕೊಂಡಿದ್ದನ್ನು ಶ್ಲಾಘಿಸಿದರು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.
ಜಿಲ್ಲಾ ವಾತರ್ಾಧಿಕಾರಿ ಮಂಜುನಾಥ ಸುಳ್ಳೊಳ್ಳಿ ಈ ಪ್ರದರ್ಶನ ಜ. 10 ರಿಂದ 12 ವರೆಗೆ ಮೂರು ದಿನಗಳ ಕಾಲ ನಡೆಯಲಿದ್ದು, ಸರಕಾರ ಜಾತಿಗೆ ತಂದ ವಿವಿಧ ಯೋಜನೆಗಳ ಮಾಹಿತಿಯನ್ನು ಪ್ರದರ್ಶನದಲ್ಲಿ ಇಡಲಾಗಿದ್ದು, ಜಾತ್ರೆಗೆ ಆಗಮಿಸಿದ ಭಕ್ತಾಧಿಗಳು ಹಾಗೂ ಸಾರ್ವಜನಿಕರು ಇದರ ಸದುಯೋಗ ಪಡೆದುಕೊಳ್ಳುವಂತೆ ಕೋರಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಚೊಳಚಗುಡ್ಡದ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ವಿಜಯ ಕೋತಿನ್, ಬಾದಾಮಿ ತಾಲೂಕಾ ವೈದ್ಯಾಧಿಕಾರಿ ಡಾ.ಎಂ.ಬಿ.ಪಾಟೀಲ, ಸಿಎಂಓ ಡಾ.ರೇವಣಸಿದ್ದಪ್ಪ ಸೇರಿದಂತೆ ಇತರರು ವಸ್ತು ಪ್ರದರ್ಶನವನ್ನು ವೀಕ್ಷಿಸಿದರು.