ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಡಿಎಚ್ಒ ಭೇಟಿ
DHO visits Toranagallu Community Health Centre
ಬಳ್ಳಾರಿ, ಆ.19: ಸಂಡೂರು ತಾಲೂಕಿನ ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಲಕಾನಂದ ಡಿ. ಮಳಗಿ ಅವರು ಮಂಗಳವಾರ ಭೇಟಿ ನೀಡಿ, ಆಸ್ಪತ್ರೆಯ ವೈದ್ಯಕೀಯ ಸೇವೆಗಳು ಹಾಗೂ ಸಾರ್ವಜನಿಕರಿಗೆ ದೊರೆಯುತ್ತಿರುವ ಚಿಕಿತ್ಸಾ ಸೌಲಭ್ಯಗಳನ್ನು ಪರೀಶೀಲಿಸಿದರು.
ಆಸ್ಪತ್ರೆಯ ಆಡಳಿತ ಹಾಗೂ ವೈದ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಂತೆ ಸಿಬ್ಬಂದಿಗೆ ಸೂಚಿಸಿದರು. ಎಲ್ಲ ವೈದ್ಯರು ಹಾಗೂ ಸಿಬ್ಬಂದಿ ನಿಗದಿತ ಸಮಯಕ್ಕೆ ಸಮವಸ್ತ್ರ ಧರಿಸಿ ಕರ್ತವ್ಯಕ್ಕೆ ಹಾಜರಾಗಬೇಕು. ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ತಿಳಿಸಿದರು.
ತಾಯಿ-ಮಕ್ಕಳ ಆರೋಗ್ಯ ಕಾರ್ಯಕ್ರಮದಡಿ ಅಗತ್ಯ ಓಷಧಗಳು, ಲಸಿಕೆಗಳು ಹಾಗೂ ನಾಯಿ ಮತ್ತು ಹಾವು ಕಡಿತಕ್ಕೆ ನೀಡುವ ಜೀವ ರಕ್ಷಕ ಓಷಧಗಳನ್ನು ಸದಾ ದಾಸ್ತಾನಿನಲ್ಲಿ ಇರಿಸಿಕೊಳ್ಳಬೇಕು ಎಂದು ಸೂಚಿಸಿದರು. ಕ್ಷಯರೋಗ, ಕುಷ್ಠರೋಗ, ಡೆಂಗ್ಯೂ, ಚಿಕೂನ್ಗುನ್ಯಾ ಸೇರಿದಂತೆ ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ತಡೆ ಕುರಿತು ಕ್ಷೇತ್ರ ಸಿಬ್ಬಂದಿ ನಿರಂತರ ಜಾಗೃತಿ ಮೂಡಿಸಬೇಕು ಎಂದರು.
ಮಳೆಗಾಲದ ಹಿನ್ನೆಲೆಯಲ್ಲಿ ಮನೆಗಳ ಸುತ್ತಮುತ್ತ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಲು ಹಾಗೂ ಸೊಳ್ಳೆಗಳ ಉತ್ಪತ್ತಿ ತಡೆಯಲು ಗ್ರಾಮ ಮಟ್ಟದಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.
ಹೆರಿಗೆ ಕೊಠಡಿಗೆ ಭೇಟಿ ನೀಡಿ ಪರೀಶೀಲಿಸಿದ ಅವರು, ಪ್ರತಿಯೊಬ್ಬ ನವಜಾತ ಶಿಶುವಿಗೂ ಸಮಯಕ್ಕೆ ಸರಿಯಾಗಿ ಲಸಿಕೆ ನೀಡಬೇಕು. ಬಾಣಂತಿಯರಿಗೆ ಕಬ್ಬಿಣಾಂಶ ಮತ್ತು ಕ್ಯಾಲ್ಸಿಯಂ ಮಾತ್ರೆಗಳನ್ನು ಕಡ್ಡಾಯವಾಗಿ ವಿತರಿಸಬೇಕು ಎಂದು ತಿಳಿಸಿದರು.
ಆಸ್ಪತ್ರೆಯ ವಿವಿಧ ವಾರ್ಡ್ಗಳು, ಓಷಧ ಕೊಠಡಿ, ಪ್ರಯೋಗಾಲಯ ಹಾಗೂ ಪ್ರಮುಖ ದಾಖಲೆಗಳನ್ನು ಪರೀಶೀಲಿಸಿದ ಅವರು, ಸಾರ್ವಜನಿಕರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಂಡೂರು ತಾಲೂಕು ಆರೋಗ್ಯಾಧಿಕಾರಿ ಡಾ. ಹರೀಶ್, ಆಡಳಿತ ವೈದ್ಯಾಧಿಕಾರಿ ಡಾ. ಗೋಪಾಲರಾವ್, ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 