ಬೀದರ್: ಎಸ್ಬಿಐ ಎಟಿಎಂ ದರೋಡೆ ಮತ್ತು ಶೂಟೌಟ್ ಪ್ರಕರಣದ ವಿಶೇಷ ತನಿಖಾ ತಂಡದ ನೇತೃತ್ವ ವಹಿಸಿರುವ ಕಲಬುರ್ಗಿ ಡಿಐಜಿ ಅಜಯ್ ಹಿಲೋರಿ ದಿಢೀರ್ ಅಸ್ವಸ್ಥರಾಗಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಜಯ್ ಹಿಲೋರಿ ಅವರು ಅಧಿಕ ರಕ್ತದೊತ್ತಡದಿಂದ ನಗರದ ಖಾಸಗಿ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆ್ಯಂಜಿಯೋಗ್ರಫಿ ಮಾಡಿ ಚಿಕಿತ್ಸೆ ನೀಡಲಾಗಿದೆ. ಗುರುವಾರ ಸಂಜೆ ಡಿಸ್‌ಚಾರ್ಜ್ ಮಾಡಲಾಗುವುದು ಎಂದು ಆಸ್ಪತ್ರೆಯ ಹಿರಿಯ ವೈದ್ಯ ಡಾ. ಚಂದ್ರಕಾಂತ ಗುದಗೆ ತಿಳಿಸಿದ್ದಾರೆ.