ದ.ಕ. ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅಧಿಕಾರ ಸ್ವೀಕಾರ

 ಮಂಗಳೂರು, ಸೆ 7   ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.   ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಯವರನ್ನು ಸ್ವಾಗತಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್,  ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು. ಸಿಂಧು ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ. ಈ ಹಿಂದೆ, 1989 ರಲ್ಲಿ ರಂಜನಿ ಶ್ರೀಕುಮಾರ್ ಅವರು ಅವಿಭಜಿತ ದ.ಕ. ಜಿಲ್ಲೆಯ ಪ್ರಥಮ ಮಹಿಳಾ  ಜಿಲ್ಲಾಧಿಕಾರಿಯಾಗಿದ್ದರು. ಸಿಂದು ಬಿ. ರೂಪೇಶ್ ಅವರು ದ.ಕ. ಜಿಲ್ಲೆಯ 129 ನೇ ಜಿಲ್ಲಾಧಿಕಾರಿ. ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷ. ಹಾಲಿ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ನಿನ್ನೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ, ಇಂತಹ ಸಂದರ್ಭದಲ್ಲಿ ತಾವು ಅಧಿಕಾರಿಯಾಗಿ ಮುಂದುವರಿಯುವುದು ಸರಿಯಲ್ಲ ಎಂದು ಹೇಳಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದರು. ರಾಜೀನಾಮೆಯ ಬೆನ್ನಲ್ಲೇ ಸಿಂಧು ರೂಪೇಶ್ ಅವರನ್ನು ಜಿಲ್ಲಾಧಿಕಾರಿಯಾಗಿ ಸರ್ಕಾರ ನೇಮಿಸಲಾಗಿದೆ.