ಬೆಂಗಳೂರು, ಏ 11,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಮಾನಿಗಳಿಂದ ಒಂದು ಸಾವಿರ ಬಡ ಕುಟುಂಬಗಳಿಗೆ ಆಹಾರ ಧಾನ್ಯ ಹಾಗೂ ದಿನಬಳಕೆ ವಸ್ತುಗಳ ಕಿಟ್ ವಿತರಿಸಲಾಯಿತು.ಯಲಹಂಕ ಬಳಿಯ ಹುಣಸಮಾರನಹಳ್ಳಿ, ಸುಗ್ಗಟ್ಟ, ಭಾರತಿನಗರ ಸೇರಿದಂತೆ ಜಾಲಹೋಬಳಿಯ ಹಲವೆಡೆ ಅಖಿಲ ಕರ್ನಾಟಕ ಡಿ. ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಎಂ.ಎಸ್.ಅಂಗಡಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶಿವಕುಮಾರ್ ಅಭಿಮಾನಿಗಳು, ಕೂಲಿ ಕಾರ್ಮಿಕರು ಹಾಗೂ ಬಡ ಕುಟುಂಬಗಳನ್ನು ಗುರುತಿಸಿ ಮನೆ ಮನೆಗೆ ತೆರಳಿ ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಎಣ್ಣೆ, ಸಕ್ಕರೆ, ಸೋಪು, ಪೇಸ್ಟ್, ಮಾಸ್ಕ್ ವಿತರಿಸಿದರು.