ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್

DK Sivakumar expressed his appreciation for the organization of the Kumbh Mela

ಬೆಂಗಳೂರು 26: ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಕುಂಭಮೇಳಕ್ಕೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ ಈಗ ಶಿವರಾತ್ರಿ ಅಂಗವಾಗಿ ಇಶಾ ಫೌಂಡೇಶನ್ ಗೆ ಭೇಟಿ ನೀಡುತ್ತಿರುವುದರ ಬಗ್ಗೆ ಹಲವು ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದ್ದು, ಅದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಟೀಕಾಕಾರರಿಗೆ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಸದಾಶಿವ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ನಾನು ಕುಂಭಮೇಳದಲ್ಲಿ ಭಾಗಿಯಾಗಿದ್ದು ನನ್ನ ನಂಬಿಕೆ, ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ. ಆದರೆ ಎಲ್ಲ ಧರ್ಮದ ಬಗ್ಗೆ ಗೌರವ ಇಟ್ಟಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಕುಂಭಮೇಳದ ಆಯೋಜನೆ ಬಗ್ಗೆಯೂ ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿರುವ ಡಿಕೆ ಶಿವಕುಮಾರ್, ಕುಂಭ ಮೇಳದಲ್ಲಿ ಉತ್ತಮ ಅನುಭವ ಆಗಿದೆ. ತುಂಬಾ ಉತ್ತಮವಾಗಿ ನಿರ್ವಹಣೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕುಂಭ ಮೇಳ ವಿಷಯವನ್ನು ರಾಜಕೀಯಗೊಳಿಸುವುದನ್ನು ವಿರೋಧಿಸುವ ಮೂಲಕ ತಮ್ಮದೇ ಪಕ್ಷದವರಿಗೆ ಟಾಂಗ್ ಕೊಟ್ಟಿದ್ದಾರೆ.