ಸಿದ್ದರಾಮಯ್ಯಗೆ ಮತ್ತೆ ಡಿಕೆಶಿ ಬೆಂಬಲ
DK Sivakumar has again supported Siddaramaiah
ಬೆಂಗಳೂರು 03: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ಜೋರಾಗಿರುವ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಪಕ್ಷ ಮತ್ತು ನಾಯಕತ್ವದ ನಿರ್ಧಾರ ತಮಗೆ ಮುಖ್ಯ ಎಂದು ಹೇಳಿದ ಅವರು, 2028 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವತ್ತ ತಮ್ಮ ಗಮನ ಉಳಿದಿದೆ ಎಂದು ಒತ್ತಿ ಹೇಳಿದರು.
ಬುಧವಾರ ಮಾತನಾಡಿದ್ದ ಡಿಕೆಶಿ, ʼನನ್ನ ಮುಂದೆ ಬೇರೆ ಆಯ್ಕೆ ಏನಿದೆ? ಮುಖ್ಯಮಂತ್ರಿಗಳ ಬೆನ್ನಿಗೆ ನಿಂತು ಸಹಕಾರ ನೀಡುತ್ತೇನೆ’ ಎಂದು ಹೇಳಿದ್ದರು. ನಂದಿ ದೇಗುಲದ ಆವರಣದಲ್ಲಿ “5 ವರ್ಷ ನಾನೇ ಸಿಎಂ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ನಂದಿಬೆಟ್ಟದಲ್ಲಿ ಪ್ರತಿಕ್ರಿಯಿಸಿದ್ದ ಡಿಕೆಶಿ, “ನನ್ನ ಮುಂದೆ ಬೇರೆ ಆಯ್ಕೆಗಳು ಏನಿವೆ’ ಎಂದು ಸುದ್ದಿಗಾರರನ್ನು ಪ್ರಶ್ನಿಸಿದ್ದರು. ಮುಖ್ಯಮಂತ್ರಿಗಳ ಬೆನ್ನಿಗೆ ನಿಂತು ಸಹಕಾರ ನೀಡುತ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ನಾನೊಬ್ಬನೇ ಪಕ್ಷ ಕಟ್ಟಿದ್ದೇನೆಯೇ? ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ಕಾರ್ಯಕರ್ತರು ಸಾಕಷ್ಟು ಶ್ರಮ ವಹಿಸಿದ್ದಾರೆ ಎಂದೂ ಹೇಳಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 