ಮಹಾಕುಂಭ ಮೇಳದಲ್ಲಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಡಿಕೆ ಶಿವಕುಮಾರ್
DK Sivakumar took holy bath at Triveni Sangam at Mahakumbha Mela
ಪ್ರಯಾಗ್ ರಾಜ್ 09: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ ಅವರ ಜೊತೆಯಲ್ಲಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಡಿಕೆ ಶಿವಕುಮಾರ್ ಅವರಿಗೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗಿಶ್ವರ ಶಿವಾಚಾರ್ಯ ಸ್ವಾಮೀಜಿ ಅವರೂ ಕೂಡ ಸಾಥ್ ನೀಡಿದರು.
ಇನ್ನು ಪುಣ್ಯಸ್ನಾನ ಮಾಡಿರುವ ಫೋಟೋಗಳನ್ನು ಡಿಕೆಶಿ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಂಡಿದ್ದು, ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ ಎಂದು ಬರೆದುಕೊಂಡಿದ್ದಾರೆ.
ಇನ್ನು ಪವಿತ್ರ ಸ್ನಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, 'ಕುಂಭಮೇಳವನ್ನು ಇಷ್ಟೊಂದು ಪವಿತ್ರ ರೀತಿಯಲ್ಲಿ ನಡೆಸಿದ್ದಕ್ಕಾಗಿ ಎಲ್ಲಾ ಸಂಘಟಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇದು ಒಬ್ಬರ ಜೀವನದಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಇಲ್ಲಿ ನೆರೆದಿರುವ ಲಕ್ಷಾಂತರ ಜನರು ವ್ಯವಸ್ಥೆಗಳನ್ನು ವೀಕ್ಷಿಸುತ್ತಿದ್ದಾರೆ. ಅಂತಹ ಕಾರ್ಯಕ್ರಮವನ್ನು ಆಯೋಜಿಸುವುದು ಸಣ್ಣ ಕೆಲಸವಲ್ಲ ಎಂದು ನನಗೆ ಅರ್ಥವಾಗಿದೆ. ಇದನ್ನು ಸಾಧ್ಯವಾಗಿಸಲು ಎಷ್ಟು ಶ್ರಮ ಬೇಕಾಗುತ್ತದೆ ಎಂದು ನನಗೆ ತಿಳಿದಿದೆ" ಎಂದು ಹೇಳಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 