ಕಾಂಗ್ರೆಸ್‌ಗೆ ಡಿಎಂಕೆಯಿಂದ 32 ಸೀಟುಗಳ ಆಫರ್
DMK offers 32 seats to Congress
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತಾರೂಢ ಡಿಎಂಕೆ ನೇತೃತ್ವದ ಮೈತ್ರಿಕೂಟದಲ್ಲಿ ಬಿರುಕು ಮೂಡುವ ಲಕ್ಷಣಗಳು ಕಾಣುತ್ತಿವೆ. ಡಿಎಂಕೆ ನೀಡುತ್ತಿರುವ 32 ಸೀಟುಗಳ ಆಫರ್ನಿಂದ ಅಸಮಾಧಾನಗೊಂಡಿರುವ ತಮಿಳುನಾಡು ಕಾಂಗ್ರೆಸ್ ನಾಯಕರು, ನಟ ವಿಜಯ್ ಅವರ 'ತಮಿಳಗ ವೆಟ್ರಿ ಕಳಗಂ' (TVK) ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ರಾಹುಲ್ ಗಾಂಧಿ ಅವರ ಮುಂದೆ ಪ್ರಸ್ತಾಪ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕನಿಷ್ಠ 40 ಸೀಟುಗಳ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್, ಈಗ 38 ಸೀಟುಗಳಿಗೆ ಪಟ್ಟು ಹಿಡಿದಿದೆ.ಆದರೆ ಕಾಂಗ್ರೆಸ್ಗೆ ಕೇವಲ 32 ಸೀಟುಗಳನ್ನು ನೀಡಲು ಡಿಎಂಕೆ ಸಿದ್ಧವಿದೆ ಎನ್ನಲಾಗಿದೆ. ಕೇವಲ ಮೈತ್ರಿಯಷ್ಟೇ ಅಲ್ಲದೆ, ಚುನಾವಣೆ ಗೆದ್ದ ನಂತರ ಸರ್ಕಾರದಲ್ಲಿ 'ಅಧಿಕಾರ ಹಂಚಿಕೆ' (ಸಚಿವ ಸ್ಥಾನ) ಬೇಕು ಎಂಬುದು ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಅವರ ಪ್ರಬಲ ಬೇಡಿಕೆಯಾಗಿದೆ.
ಇದೇ ವೇಳೆ, ನಟ ವಿಜಯ್ ಅವರ ಟಿವಿಕೆ ಪಕ್ಷವು ಕಾಂಗ್ರೆಸ್ ಅನ್ನು "ನೈಸರ್ಗಿಕ ಮಿತ್ರ" ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. "ರಾಹುಲ್ ಗಾಂಧಿ ಮತ್ತು ವಿಜಯ್ ಉತ್ತಮ ಸ್ನೇಹಿತರು. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ," ಎಂದು ಟಿವಿಕೆ ವಕ್ತಾರ ಫೆಲಿಕ್ಸ್ ಜೆರಾಲ್ಡ್ ಹೇಳಿದ್ದಾರೆ.
ಟಿವಿಕೆ ನಾಯಕ ನಿರ್ಮಲ್ ಕುಮಾರ್ ಪ್ರತಿಕ್ರಿಯಿಸಿ, "ಮೈತ್ರಿ ಬಗ್ಗೆ ಪಕ್ಷದ ಮುಖ್ಯಸ್ಥ ವಿಜಯ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಚುನಾವಣೆಗೆ ಇನ್ನೂ ಎರಡು ತಿಂಗಳು ಬಾಕಿ ಇರುವುದರಿಂದ ಸಮಾಲೋಚನೆಗಳು ನಡೆಯುತ್ತಿವೆ ಎಂದಿದ್ದಾರೆ.
ಡಿಎಂಕೆ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ವಿಜಯ್ ಅವರ ಟಿವಿಕೆ ಕಾರ್ಡ್ ಬಳಸುತ್ತಿದೆಯೇ ಅಥವಾ ನಿಜವಾಗಿಯೂ ಮೈತ್ರಿ ಬದಲಾಗಲಿದೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.
ಮತ್ತೊಂದು ಕಡೆ ತಮಿಳುನಾಡಿನಲ್ಲಿ ಮೊದಲ ಬಾರಿ ಅಧಿಕಾರ ಹಿಡಿಯಲು ಸಕಲ ಪ್ರಯತ್ನ ನಡೆಸುತ್ತಿರುವ ಬಿಜೆಪಿಯು ಪ್ರಾದೇಶಿಕ ಪಕ್ಷಗಳತ್ತ ಹೆಚ್ಚು ಗಮನ ಕೇಂದ್ರೀಕರಿಸಿದ್ದು, ನಟ ವಿಜಯ್ ಅವರ ಟಿವಿಕೆ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ ಎಂದು ವರದಿಗಳು ತಿಳಿಸಿವೆ.ಒಟ್ಟಾರೆಯಾಗಿ,ನಟ ವಿಜಯ್ ಅವರ ಟಿವಿಕೆ ಪಕ್ಷವು ಯಾರ ಬಳಿ ಮೈತ್ರಿ ಮಾಡುತ್ತೆ ಎಂಬುದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 