ಬೆಂಗಳೂರು, ಮಾ.9, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡಿನ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.ನಾಡಿನ ಸಮಸ್ತ ಜನರಿಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬಣ್ಣದ ಓಕುಳಿಯ ರಂಗು ನಮ್ಮೆಲ್ಲರ ಬಾಳನ್ನು ಅರ್ಥಪೂರ್ಣವಾಗಿ ತುಂಬಲಿ. ಬಣ್ಣ ಮೈಮೇಲಿರುವುದಕ್ಕಿಂತ ಮುಖ್ಯವಾಗಿ ಬದುಕಿನಲ್ಲಿರಲಿ. ಸುರಕ್ಷಿತ ಆಚರಣೆಗೆ ಮಹತ್ವ ಕೊಡೋಣ. ಸಾಂಕ್ರಾಮಿಕ ರೋಗದ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಸಮೂಹ ಆಚರಣೆಗಳಿಂದ ದೂರವಿರೋಣ ಎಂದು ಮುಖ್ಯಮಂತ್ರಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.