ಜಮೀರ್ ಅಹ್ಮದ್ಗೆ ಡಿಸಿಎಂ, ಶಾಸಕ ಗಣೇಶ್ಗೆ ಸಚಿವ ಸ್ಥಾನ ನೀಡಲು ಡಿಎಸ್ಎಸ್ ಆಗ್ರಹ
DSS demands Deputy CM post for Zameer Ahmed and ministerial berth for MLA Ganesh
ಲೋಕದರ್ಶನ ವರದಿ
ಕಂಪ್ಲಿ, ಜು.11: ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಜನಪರ ಸೇವೆ ಸಲ್ಲಿಸುತ್ತಿರುವ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರಿಗೆ ಸಚಿವ ಸ್ಥಾನ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬುದ್ಧ, ಬಸವ, ಅಂಬೇಡ್ಕರ್ ವಾದ) ಜಿಲ್ಲಾ ಉಪಾಧ್ಯಕ್ಷ ಕರಡಿ ವಲಿಸಾಬ್ ಆಗ್ರಹಿಸಿದರು.
ಶನಿವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಬದುಕಿಗೆ ಆಸರೆಯಾಗಿದೆ ಎಂದು ಹೇಳಿದರು.
ಶಾಸಕ ಜೆ.ಎನ್. ಗಣೇಶ್ ಅವರು ಕ್ಷೇತ್ರದಲ್ಲಿ ರಸ್ತೆ, ಬೀದಿ ದೀಪ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಜನರ ಮೆಚ್ಚುಗೆ ಗಳಿಸಿದ್ದಾರೆ. ಅವರ ಜನಪರ ಕಾರ್ಯಶೈಲಿ ಹಾಗೂ ಅಭಿವೃದ್ಧಿ ದೃಷ್ಟಿಕೋನವನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಮಾಜಿ ಸಚಿವ ಜಮೀರ್ ಅಹ್ಮದ್ ಅವರು ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ ಎಂದು ಹೇಳಿದರು.
ಕಳೆದ ವರ್ಷದ ಮುಂಗಾರು ಸಂದರ್ಭದಲ್ಲಿ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಹಾನಿಗೊಳಗಾಗಿ ಅಪಾರ ಪ್ರಮಾಣದ ನೀರು ಹರಿದುಹೋಗುವ ಅಪಾಯ ಎದುರಾದಾಗ, ಜಮೀರ್ ಅಹ್ಮದ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ತಿಳಿಸಿದರು.
ರಾಜ್ಯದ ಎಲ್ಲ ವರ್ಗಗಳ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಜಮೀರ್ ಅಹ್ಮದ್ ಅವರಿಗೆ ಪ್ರಸ್ತುತ ಸರ್ಕಾರದಲ್ಲಿ ಡಿಸಿಎಂ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಜನರ ಅಸಮಾಧಾನವನ್ನು ಎದುರಿಸಬೇಕಾಗಬಹುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಸಿ. ಬಸವರಾಜ್, ಉಪಾಧ್ಯಕ್ಷ ಮೆಟ್ರಿ ಸೋಮಪ್ಪ, ಗೌರವಾಧ್ಯಕ್ಷ ಚಂದ್ರಶೇಖರ್, ತಾಲೂಕು ಯುವ ಘಟಕದ ಅಧ್ಯಕ್ಷ ಜಾಫರ್ ಸಾಬ್, ಹಮಾಲಿ ಸಂಘದ ಗೌರವಾಧ್ಯಕ್ಷ ಬಾಲಪ್ಪ, ಮುಖಂಡ ಅಂಜಿನಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 