ನೀಟ್ ಅಕ್ರಮ ಖಂಡಿಸಿ ಡಿಎಸ್‌ಎಸ್ನಿಂದ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ

 ನೀಟ್ ಅಕ್ರಮ ಖಂಡಿಸಿ ಡಿಎಸ್‌ಎಸ್ನಿಂದ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ  DSS expresses outrage against the Central Government over NEET irregularities

ಲೋಕದರ್ಶನ ವರದಿ 

  ವಿಜಯನಗರ, ಜು. 23: ನೀಟ್ ಪರೀಕ್ಷೆಯ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆಗಳನ್ನು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಭೀಮ ಮಾರ್ಗ) ವಿಜಯನಗರ ಜಿಲ್ಲಾ ಸಮಿತಿಯು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.  

ಸಮಿತಿ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ಮೇ 3ರಂದು ನಡೆದ ನೀಟ್ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿದೆ. ಈ ಬೆಳವಣಿಗೆಯಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೆಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಿದೆ.  

ಪರೀಕ್ಷಾ ಅಕ್ರಮದ ವಿರುದ್ಧ ದೇಶದಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದು, ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ಕ್ರಮವನ್ನು ಸಮಿತಿ ಖಂಡಿಸಿದೆ. ಸಮಾಜಸೇವಕ ಸೋನಂ ವಾಂಗ್ಚುಕ್ ಸೇರಿದಂತೆ ಪ್ರತಿಭಟನಾಕಾರರ ವಿರುದ್ಧ ಕೈಗೊಂಡ ಕ್ರಮವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದೆ.  

ಪ್ರಮುಖ ಆಗ್ರಹಗಳು  

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು.   

ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಂಡ ಪೊಲೀಸ್ ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು.   

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಗಳಿಗೆ 1 ಕೋಟಿ ಪರಿಹಾರ ನೀಡಬೇಕು.   

ಪ್ರಧಾನಮಂತ್ರಿ ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು.   

ವೈದ್ಯಕೀಯ ಶಿಕ್ಷಣದ ಅಧಿಕಾರವನ್ನು ರಾಜ್ಯಗಳಿಗೆ ನೀಡಬೇಕು.   

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು ರದ್ದುಪಡಿಸಬೇಕು.   

ದ್ವಿತೀಯ ಪಿಯುಸಿ ಅಂಕಗಳ ಆಧಾರದಲ್ಲಿ ವೈದ್ಯಕೀಯ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು.   

ಸಮಾಜಸೇವಕ ಸೋನಂ ವಾಂಗ್ಚುಕ್ ಅವರನ್ನು ಬಿಡುಗಡೆ ಮಾಡಬೇಕು.   

ವಿದ್ಯಾರ್ಥಿ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಿ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಬೇಕು.   

ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು.