ಒಳ ಮೀಸಲಾತಿಗೆ ಡಿಎಸ್‌ಎಸ್ ಒತ್ತಾಯ: ಶಂಕರ ಬಣಕಾರ
DSS insists on internal reservation: Shankar Banakara
ಯಲಬುರ್ಗಾ24 : ಪರಿಶಿಷ್ಟ ಜಾತಿಗಳಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಸಮುದಾಯಗಳಿಗೆ ಒಳ ಮೀಸಲಾತಿಕಲ್ಪಿಸುವ ನ್ಯಾಯಮೂರ್ತಿಎ.ಜೆ. ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಶೀಘ್ರ ಅನುಷ್ಠಾನಗೊಳಸಬೇಕು ಎಂದುದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ಧ್ವನಿ ಚಂದ್ರಕಾಂತ ಎಸ ಕದ್ರೂಳ್ಳಿ ಬಣ ಯಲಬುರ್ಗಾ ತಾಲೂಕು ಯುವ ಘಟಕ ಅಧ್ಯಕ್ಷ ಶಂಕರ ಬಣಕಾರ ಒತ್ತಾಯಿಸಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ‘ಒಳ ಮೀಸಲಾತಿಕುರಿತು ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿರುವ ತೀರ್ಪು, ಮಾದಿಗ ಸಮುದಾಯದ ವಿವಿಧ ಸಂಘಟನೆಗಳು ನಡೆಸಿಕೊಂಡು ಬಂದಿರುವ ಹೋರಾಟಕ್ಕೆ ಸಿಕ್ಕ ಜಯವಾಗಿದೆ’ಮಾದಿಗ ಸಮಾಜವು ಶೈಕ್ಷಣಿಕ, ಆರ್ಥಿಕ, ರಾಜಕೀಯ, ಸಾಮಾಜಿಕವಾಗಿ ಹಿಂದುಳಿದ್ದು, ಒಳಮೀಸಲಾತಿಗಾಗಿ ಮೂರು ದಶಕಗಳಿಂದ ಹೋರಾಟ ಮಾಡುತ್ತಿದೆ.ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರರಾಜ್ಯ ಸರ್ಕಾರಗಳಿಗೆ ಇದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರೂ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ದೂರಿದರು. ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 