ಹುಬ್ಬಳ್ಳಿಯ ಮರ್ಯಾದೆ ಹತ್ಯೆ ಪ್ರಕರಣ ಖಂಡಿಸಿ ಡಿ.ಎಸ್,ಎಸ್ ಸಂಘಟನೆಯಿಂದ ಪ್ರತಿಭಟನೆ
DSS organization protests against Hubballi honor killing case
ಬೆಳಗಾವಿ 31: ಹುಬ್ಬಳ್ಳಿ ತಾಲೂಕಿನ ಇನಾಂವೀರಪುರ ಗ್ರಾಮದಲ್ಲಿ ನಡೆದ ದಲಿತ ಗರ್ಭಿಣಿ ಯುವತಿಯ ಮರಾ್ಯದೆ ಹತ್ಯೆ ಘಟನೆಯನ್ನು ಖಂಡಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಮರಣ ದಂಡನೆ ವಿಧಿಸಲು ಹಾಗೂ ಇಂಥ ಘಟನೆಗಳ ತಡೆಗೆ ಕಠಿಣ ಸರ್ಕಾರಿ ಆದೇಶ ಹೊರಡಿಸಲು ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬೆಳಗಾವಿಯ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂದೆ ಪ್ರತಿಭಟನೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಂಘಟನಾಕಾರರು ಇದೊಂದು ಕೇವಲ ಕೊಲೆಯಲ್ಲ, ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಕ್ರೂರ ಕೃತ್ಯ. ತನ್ನಿಷ್ಟದಂತೆ ಒಬ್ಬ ದಲಿತ ಯುವಕನನ್ನು ಮದುವೆಯಾಗಿದ್ದಕ್ಕಾಗಿ ಗರ್ಭಿಣಿ ಮಾನ್ಯಳನ್ನು ಕೊಲೆ ಮಾಡಿದ ಪಾಪಿ ತಂದೆ ಸೇರಿದಂತೆ ಉಳಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಕೊಲೆ ಪ್ರಕರಣದ ಜೊತೆಗೆ, ಎಸ್.ಸಿ, ಎಸ್.ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕಠಿಣ ಸೆಕ್ಷನ್’ಗಳನ್ನು ದಾಖಲಿಸಿ, ಯಾವುದೇ ಕಾರಣಕ್ಕೂ ಜಾಮೀನು ಸಿಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಸಂತ್ರಸ್ತ ಕುಟುಂಬದ ಉಳಿದ ಸದಸ್ಯರಿಗೆ ಸರ್ಕಾರವು ಸೂಕ್ತ ಪೊಲೀಸ್ ರಕ್ಷಣೆ ನೀಡಬೇಕು ಹಾಗೂ ಅವರಿಗೆ ಗರಿಷ್ಠ ಮಟ್ಟದ ಆರ್ಥಿಕ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ನೀಡಬೇಕು ಎಂದು ಹೇಳಿದರು.
ಶ್ರೀಕಾಂತ್ ಮಾದರ್ ಮಾತನಾಡಿ ಜಾತಿ ವ್ಯವಸ್ಥೆಯ ಕ್ರೂರ ಮುಖವನ್ನು ಅನಾವರಣಗೊಳಿಸಿರುವ ಈ ಘಟನೆಯಲ್ಲಿ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು. ಸಂತ್ರಸ್ತರಿಗೆ ನ್ಯಾಯ ಸಿಗದಿದ್ದಲಿ ರಾಜ್ಯಾದ್ಯಂತ ಚಂದ್ರಕಾಂತ ಕಾದ್ರೋಳ್ಳಿ ಬಣ ಸಂಘಟನೆ ವತಿಯಿಂದ ತೀವ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಶ್ರೀಕಾಂತ್ ಮಾದರ್, ಮಿಲಿಂದ್ ಐಹೊಳೆ, ಬಸವರಾಜ ಕಟ್ಟಿಮನಿ, ಬಾಳವ್ವ ಕಾಂಬಳೆ, ಸುನಿತಾ ಮೋದಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 