ನವದೆಹಲಿ, ಡಿ. 24, ಈ ವರ್ಷದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್
ಅವರು ಡಿಸೆಂಬರ್ 29 ರಂದು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್
ಜಾವಡೇಕರ್ ತಿಳಿಸಿದ್ದಾರೆ. ಭಾನುವಾರ ರಾಷ್ಟ್ರಪತಿಗಳ
ನಿವಾಸದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಜವಾಡೇಕರ್ ಹೇಳಿದ್ದಾರೆ. ಆನಾರೋಗ್ಯದ ಕಾರಣದಿಂದ
ಅಮಿತಾಬ್ ಬಚ್ಚನ್ ಅವರು ಸೋಮವಾರ ನಡೆದ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿರಲಿಲ್ಲ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು 66ನೇ ರಾಷ್ಟ್ರೀಯ
ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದ ಆರಂಭದಲ್ಲೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಪುರಸ್ಕೃತ ಅಮಿತಾಬ್ ಅವರು ಅನಾರೋಗ್ಯದ ನಿಮಿತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು
ತಿಳಿಸಲಾಗಿದೆ. ಅಮಿತಾಬ್ ಬಚ್ಚನ್ ಭಾನುವಾರ ಟ್ವಿಟ್
ಮಾಡಿದ್ದು, ಪ್ರತಿಷ್ಠಿತ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಜ್ವರದಿಂದ ಬಳಲುತ್ತಿದ್ದರಿಂದ
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಲು ಆಗುವುದಿಲ್ಲ. ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಪ್ರವಾಸ
ಮಾಡಲು ಸಾಧ್ಯವಿಲ್ಲ. ಹೀಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬರಲು ಸಾಧ್ಯವಿಲ್ಲ
ಎಂದು ತಿಳಿಸಿದ್ದಾರೆ. ಬಚ್ಚನ್ ತಮ್ಮ ಶ್ರೇಷ್ಠ ವೃತ್ತಿಜೀವನದಲ್ಲಿ
ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದಾರೆ. 2015 ರಲ್ಲಿ ಪಿಕು ಅವರ ಅಭಿನಯಕ್ಕಾಗಿ
ಬಿಗ್ ಬಿ ಪ್ರಶಸ್ತಿಯನ್ನು ಪಡೆದಿದ್ದರು.