ನಿಡೋಣಿಯಲ್ಲಿ ಕ್ಷೀರ ಯೋಜನೆ ಸಂಶೋಧನಾ ಕೇಂದ್ರಕ್ಕೆ ಚಾಲನೆ
Dairy project research centre launched in Nidoni
ವಿಜಯಪುರ 02: ಸಮಾಜದಲ್ಲಿ ಇಂದು ನಾವು ಅಭಿವೃದ್ಧಿ, ಶಿಕ್ಷಣ ಮತ್ತು ಸೌಲಭ್ಯಗಳನ್ನು ಅನುಭವಿಸುತ್ತಿರುವುದು ವಚನಪಿತಾಮಹ ಡಾ. ಫ.ಗು. ಹಳಕಟ್ಟಿಯವರ ತ್ಯಾಗ ಮತ್ತು ಶ್ರಮದ ಫಲವಾಗಿದೆ ಎಂದು ನಿಡೋಣಿ ವಿರಕ್ತ ಮಠದ ಪರಮಪೂಜ್ಯ ಸಿದ್ಧಲಿಂಗ ಶ್ರೀಗಳು ಹೇಳಿದರು. ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮದ ದಾಶ್ಯಾಳ ರಸ್ತೆಯ ವಿರಕ್ತ ಮಠದ 11 ಎಕರೆ ಜಮೀನಿನಲ್ಲಿ, ವಚನಪಿತಾಮಹ ಡಾ. ಫ.ಗು. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಬಿ.ಎಲ್.ಡಿ.ಇ ಸಂಸ್ಥೆ, ಅಕ್ಷಯಕಲ್ಪ ಮತ್ತು ಕೃಷಿಕಲ್ಪ ಸಹಯೋಗದಲ್ಲಿ ಆರಂಭಿಸಲಾದ ಕ್ಷೀರ ಯೋಜನೆಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹಳಕಟ್ಟಿಯವರು ಧಾರವಾಡದಿಂದ ಬಂದು ವಿಜಯಪುರದಲ್ಲಿ ಮಾಡಿದ ಸೇವಾ ಕಾರ್ಯಗಳು ಅತ್ಯಂತ ಮಹತ್ವದವು. ಬಸವಾದಿ ಶರಣರ ವಚನ ಸಾಹಿತ್ಯ ನಮಗೆ ಲಭ್ಯವಾಗಲು ಅವರ ಪಾತ್ರ ಅಪಾರವಾಗಿದೆ ಎಂದು ಶ್ರೀಗಳು ಹೇಳಿದರು. ಅಂತಹ ಮಹನೀಯರನ್ನು ಸ್ಮರಿಸುವ ಕಾರ್ಯವನ್ನು ಮುಂದುವರೆಸುತ್ತಿರುವ ಬಿ.ಎಲ್.ಡಿ.ಇ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಬಸನಗೌಡ ಎಂ. ಪಾಟೀಲ ಮಾತನಾಡಿ, ಕ್ಷೀರ ಯೋಜನೆಯು ರೈತರು ಹೈನುಗಾರಿಕೆಯಿಂದ ಆರ್ಥಿಕವಾಗಿ ಸಬಲರಾಗಲು ಸಹಾಯ ಮಾಡುವ ಉದ್ದೇಶದಿಂದ ಬಬಲೇಶ್ವರ ಹಾಗೂ ತಿಕೋಟಾ ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ ಎಂದರು. ಸರಿಯಾದ ಕೊಟ್ಟಿಗೆ ನಿರ್ವಹಣೆ, ಆಹಾರ ಪದ್ಧತಿ ಮತ್ತು ವೈಜ್ಞಾನಿಕ ಹೈನುಗಾರಿಕೆ ಮೂಲಕ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಬಹುದು ಎಂಬುದು ಯೋಜನೆಯ ಮೂಲ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 