ಕಿಶೋರಗೆ ಕಠಿಣ ಶಿಕ್ಷೆ ವಿಧಿಸಿ, ದೇಶದಿಂದ ಗಡಿಪಾರು ಮಾಡಿ: ದಲಿತ ಸಂಘಟನೆ ಒತ್ತಾಯ
Dalit organization demands strict punishment and deportation of Kishora from the country
ಕಿಶೋರಗೆ ಕಠಿಣ ಶಿಕ್ಷೆ ವಿಧಿಸಿ, ದೇಶದಿಂದ ಗಡಿಪಾರು ಮಾಡಿ: ದಲಿತ ಸಂಘಟನೆ ಒತ್ತಾಯ
ಶಿಗ್ಗಾವಿ 23: ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರತ್ತ ಶೂ ಎಸೆಯಲು ಪ್ರಯತ್ನಿಸಿದ ವಕೀಲ ರಾಕೇಶ ಕಿಶೋರಗೆ ಕಠಿಣ ಶಿಕ್ಷೆ ವಿಧಿಸಿ, ದೇಶದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ಸಂಘಟನೆ, ಮಾನವ ಬಂಧುತ್ವ ವೇದಿಕೆ, ದಲಿತ ಸಂಘರ್ಷ ಸಮಿತಿ, ಸಮತಾ ಸೈನಿಕ ದಳ, ಜೀವಿಕ ಜೀತದಾಳು ಸಮಿತಿ ವತಿಯಿಂದ ಪಟ್ಟಣದ ಡಾ. ಅಂಬೇಡ್ಕರ್ ಆಡಳಿತ ಸಂಕೀರ್ಣದ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.
ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಶೂ ಎಸೆದು, ನ್ಯಾಯ ನಿಂದನೆ ಮಾಡಿದಂತಹ ಪ್ರಕರಣ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಕೃತ್ಯಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಶೋಕ ಕಾಳೆ, ಫಕೀರ್ಪ ಕುಂದೂರ, ಕರೆಪ್ಪ ಕಟ್ಟಿಮನಿ, ಸುರೇಶ ಹರಿಜನ, ಸಂತೋಷ ಕಟ್ಟಿಮನಿ, ಪ್ರಕಾಶ ಹರಿಜನ, ಶಂಕ್ರ್ಪ ಹರಿಜನ, ಎಲ್ಲಪ್ಪ ಹರಿಜನ, ಬಸವರಾಜ ಕಡೇಮನಿ, ಯಲ್ಲಪ್ಪ ಮುಂದಿನಮನಿ, ಎಚ್.ಐ. ಬೆಳಗಲಿ ಇತರರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 