ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಅಮಾನುಷವಾಗಿ ಥಳಿಸಿ ಹತ್ಯೆ: ಮೂವರ ಬಂಧನ
Dalit youth brutally beaten to death over trivial reason: Three arrested
ಲೋಕದರ್ಶನ ವರದಿ
ಜಮಖಂಡಿ 15: ಶಾಲಾ ವಾರ್ಷಿಕೋತ್ಸವದ ಸಂಭ್ರಮದ ನಡುವೆ ಸಣ್ಣ ಕಲ್ಲು ಎಸೆದಿದ್ದಾನೆಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನೊಬ್ಬನನ್ನು ಅಮಾನುಷವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ತಾಲೂಕಿನ ಸಾವಳಗಿ ಗ್ರಾಮದ ಸುದೀಪ ಬಸಪ್ಪ ಪಾಂಗೆ (19) ಕೊಲೆಯಾದ ಯುವಕ. ಈ ಸಂಬಂಧ ರಾಜು ಭೀಮಪ್ಪ ಮಾಳಿ, ವಿಜಯ ರಾಮಚಂದ್ರ ಸಾವಳಗಿ ಊರ್ಫ್ ಲಮಾಣಿ, ಮಲ್ಲಿಕಾರ್ಜುನ ನಿಂಗಪ್ಪ ಮಾಳಿ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಾವಳಗಿ ಪೊಲೀಸರು ಮೂವರನ್ನೂ ಬಂಧಿಸಿದ್ದಾರೆ.
ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಗ್ರಾಮಸ್ಥರು ವೀಕ್ಷಿಸುತ್ತಿದ್ದರು. ಈ ವೇಳೆ ಪಂಚಾಯಿತಿ ಕಟ್ಟಡದ ಚಾವಣಿಯ ಮೇಲೆ ಕುಳಿತಿದ್ದ ಕೆಲವು ಯುವಕರಲ್ಲಿ ಯಾರೋ ಒಬ್ಬರು ಕೆಳಗೆ ಕುಳಿತವರ ಮೇಲೆ ಸಣ್ಣ ಕಲ್ಲನ್ನು ಎಸೆದಿದ್ದಾರೆ ಎನ್ನಲಾಗಿದೆ. ಇದರಿಂದ ಕೆರಳಿದ ಆರೋಪಿಗಳು, ಯಾರು ಕಲ್ಲು ಎಸೆದಿದ್ದಾರೆಂದು ವಿಚಾರಿಸದೆಯೇ ಸುದೀಪನ ಮೇಲೆ ಮುಗಿಬಿದ್ದಿದ್ದಾರೆ.
ನೀನೇ ಕಲ್ಲು ಎಸೆದಿದ್ದೀಯಾ ಎಂದು ಕಿರುಚಾಡುತ್ತಾ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಮನಬಂದಂತೆ ಥಳಿಸಿದ್ದ ಆರೋಪಿಗಳು. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು ಅಸ್ವಸ್ಥನಾದ ಸುದೀಪನನ್ನು ತಕ್ಷಣವೇ ಜಮಖಂಡಿಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ. ಈ ಕುರಿತು ಮೃತನ ಕುಟುಂಬಸ್ಥರು ನೀಡಿದ ದೂರಿನನ್ವಯ ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆಯನ್ನು ಮುಂದುವರಿಸಿದ್ದಾರೆ.
ತಾಯಿಗೆ ಆಸರೆಯಾಗಿದ್ದ ಮಗ :
ಮೃತ ಸುದೀಪ ಪಾಂಗೆ ಮನೆಯ ಜವಾಬ್ದಾರಿಯನ್ನು ಹೊತ್ತಿದ್ದ ಯುವಕ. ತಂದೆಯನ್ನು ಕಳೆದುಕೊಂಡಿದ್ದ ಕುಟುಂಬಕ್ಕೆ ಇಬ್ಬರು ಗಂಡು ಮಕ್ಕಳಲ್ಲಿ ಸುದೀಪನೇ ಕಿರಿಯವನು. ಕೂಲಿ ಕೆಲಸ ಮಾಡಿಕೊಂಡಿದ್ದ ಈತ ತನ್ನ ತಾಯಿಗೆ ಆಸರೆಯಾಗಿ ನಿಂತಿದ್ದನು. ಮಗನಿಗೆ ಅಮಾನುಷವಾಗಿ ಥಳಿಸಿರುವುದನ್ನು ಕಂಡ ತಾಯಿಯ ರೋದನೆ ಮರುಕ ಹುಟ್ಟಿಸುವಂತಿತ್ತು. ನನ್ನ ಮಗ ಯಾರ ತಂಟೆಗೂ ಹೋಗುತ್ತಿರಲಿಲ್ಲ. ನಮಗೆ ಆಸರೆಯಾಗಿದ್ದ ಜೀವವನ್ನು ಕ್ಷುಲ್ಲಕ ಕಾರಣಕ್ಕೆ ಬಲಿಪಡೆದರಲ್ಲ ಎಂದು ಹಲುಬುತ್ತಿರುವ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 