ಶಿರಹಟ್ಟಿ ಪಿಎಸ್‌ಐ ಅಮಾನತಿಗೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ದಲಿತ ಮಿತ್ರ ಮಂಡಳಿ ಮನವಿ
Dalita Mitra Mandali submits memorandum to Deputy Commissioner demanding suspension of Shirahatti PS
ಲೋಕದರ್ಶನ ವರದಿ
ಗದಗ 27 : ನ್ಯಾಯಾಲಯಕ್ಕೆ ವ್ಯಕ್ತಿಯೋರ್ವನನ್ನು ಹಾಜರಪಡಿಸಲು ಕರೆದೊಯ್ಯವ ಸಂದರ್ಭದಲ್ಲಿ ಹಲ್ಲೆ ನಡೆಸಿ ತೀವ್ರ ಗಾಯಗೋಳಿಸಿರುವ ಶಿರಹಟ್ಟಿ ಪೊಲೀಸ್ ಠಾಣೆಯ ಪಿಎಸ್‌ಐ ಈರ್ಪ ರಿತ್ತಿ ಅವರನ್ನು ಅಮಾನತುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗದಗನಲ್ಲಿ ದಲಿತ ಮಿತ್ರ ಮಂಡಳಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮಿತ್ರ ಮಂಡಳಿಯ ಅಧ್ಯಕ್ಷ ಕುಮಾರ ನಡಗೇರಿ ಶಿರಹಟ್ಟಿ ಪಿಎಸ್‌ಐ ಈರ್ಪ ರಿತ್ತಿ ಹಾಗೂ ಸಂಗಡಿಗರು ಕನಕವಾಡ ಗ್ರಾಮದ ದಾದೇಗೌಡ ಪಾಟೀಲ ಅವರನ್ನು ಜುಲೈ 23ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ . ಈ ಘಟನೆಯಲ್ಲಿ ದಾದೇಗೌಡ ಪಾಟೀಲ ಅವರ ಎದೆ ಹಾಗೂ ತುಟಿಗೆ ಗಾಯಗಳಾಗಿವೆ. ಅವರು ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂಬಂಧ ಎಂಎಲ್‌ಸಿ ಪ್ರಕರಣ ದಾಖಲಾಗಿದಯೆಂದು ಹೇಳಿದರು.
ಇದೇ ಅಧಿಕಾರಿಯ ವಿರುದ್ಧ ಈ ಹಿಂದೆಯೂ ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿದ ಆರೋಪಗಳಿವೆ. ಲಕ್ಷ್ಮೇಶ್ವರದಲ್ಲಿ ಪಿಎಸ್‌ಐ ಆಗಿದ್ದ ವೇಳೆ ನವರಾತ್ರಿ ಮೂರ್ತಿ ವಿಸರ್ಜನೆ ನಂತರ ಗೋಸಾವಿ ಸಮುದಾಯದ ಜನರ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆದಿದ್ದು, ನಂತರ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಒಂದು ವರ್ಷದ ಹಿಂದೆ ಸೋಮಪ್ಪ ಲಮಾಣಿ ಎಂಬ ರೈತನ ಮೇಲೂ ಹಲ್ಲೆ ನಡೆಸಿ ಅಪಾರ ಪ್ರಮಾಣದ ಹಣವನ್ನು ವಸೂಲಿ ಮಾಡಿದ್ದರೆಂದು ಆರೋಪಿಸಿದರು.
ಪಿಎಸ್‌ಐ ಈರ್ಪ ರಿತ್ತಿ ರಾಜಕೀಯ ಮತ್ತು ಹಣದ ಪ್ರಭಾವದಿಂದ ಶಿರಹಟ್ಟಿ ಠಾಣೆಗೆ ವರ್ಗಾವಣೆಗೊಂಡು ಸಾರ್ವಜನಿಕರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಈರ್ಪ ರಿತ್ತಿ ಮನೋವಿಕಲತೆಯಿಂದ ಬಳಲುತ್ತಿದ್ದಾರೆ. ಈ ಅಧಿಕಾರಿಗೆ ಸಾರ್ವಜನಿಕರನ್ನು ಕಂಡ ಕೂಡಲೇ ಅವರ ಮೇಲೆ ಹಲ್ಲೆ ನಡೆಸುವಂತಹ ವಿಕೃತಿಯಿದೆ. ಕೂಡಲೇ ಅವರನ್ನು ಅಮಾನತುಗೊಳಿಸಿ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕೆಂದು ಆಗ್ರಹಿಸಿದರು.
ಈ ಕುರಿತು ಹತ್ತು ದಿನಗಳೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಧರಣಿ, ಅಹೋರಾತ್ರಿ ಸತ್ಯಾಗ್ರಹ, ಸರದಿ ಸತ್ಯಾಗ್ರಹ ಹಾಗೂ ಅಮರಣಾಂತಿಕ ಸತ್ಯಾಗ್ರಹ ಸೇರಿದಂತೆ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.
ಮನವಿ ಸ್ವೀಕರಿಸಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಸೂಕ್ತ ಕ್ರಮಕ್ಕಾಗಿ ಎಸ್ಪಿ ಅವರೊಂದಿಗೆ ಚರ್ಚಿಸುವದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ದಲಿತ ಮಿತ್ರ ಮಂಡಳಿಯ ಉಪಾಧ್ಯಕ್ಷ ವೆಂಕಟೇಶ ದೊಡ್ಡಮನಿ, ಗೌರವಾಧ್ಯಕ್ಷ ಪಿ.ಎಸ್. ಕಾಳೆ ಹಾಗೂ ಹಿರಿಯ ಮುಖಂಡ ಹುಲಿಗೆಪ್ಪ ವಾಲ್ಮೀಕಿ, ಸದಾನಂದಸಿಂಗ್ ಗುರ್ಲಹೊಸೂರ, ಮಂಜುನಾಥ ಯಮುನಾಳ, ಶಿವು ಬಂಗಾರಿ,ಆನಂದ ಅರಿಕೇರಿ, ಸಂತೋಷ ರಸಾಳಕರ, ಸ್ವರೂಪ ಉಳ್ಳಿಕಾಶಿ, ರಮೇಶ ವಾಲ್ಮೀಕಿ ಸೇರಿದಂತೆ ಮುಂತಾದವರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 