ದಲಿತರು ಮುಸ್ಲಿಂಮರು ಒಗ್ಗಟ್ಟಿನಿಂದ ಹೋರಾಡುವ ಅಗತ್ಯವಿದೆ: ಸತೀಶ ಜಾರಕಿಹೊಳಿ
Dalits and Muslims need to fight together said Satish Jarkiholi
ಲೋಕದರ್ಶನ ವರದಿ
ಜಮಖಂಡಿ 25: ಕಳೆದ 12 ವರ್ಷಗಳಿಂದ ಭಾರತ ಬದಲಾಗಿದೆ. ಹೆಜ್ಜೆ-ಹೆಜ್ಜೆಗೂ ಸಮಸ್ಯೆಗಳು ಎದುರಾಗಿವೆ, ದಲಿತ ಮುಸ್ಲಿಂರ ಸಮಸ್ಯೆಗಳು ಒಂದೇ ಆಗಿವೆ, ದಲಿತರು ಮುಸ್ಲಿಂಮರು ಒಗ್ಗಟ್ಟಿನಿಂದ ಹೋರಾಟ ಮಾಡುವ ಅವಶ್ಯಕತೆ ಇದೆ ಎಂದು ಲೋಕೊಪಯೋಗಿ ಇಲಾಖೆಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಅಬುಬಕರ ದರ್ಗಾ ಮೈದಾನದಲ್ಲಿ ಶಹೀದ ಹಜರತ ಟಿಪು ಸುಲ್ತಾನ ಜಯಂತ್ಯೋತ್ಸವ ಸಮಿತಿ ಹಮ್ಮಿಕೊಂಡಿದ್ದ ಕೌಮಿ ಏಕತಾ (ಸರ್ವ ಧರ್ಮಗಳ ಸಮೇಳನ) ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ದಲಿತರು ಮುಸ್ಲಿಂರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚಿಂತನೆಗಳು ನಡೆಯಬೇಕಿದೆ, ಸಮಸ್ಯೆಗಳ ಪರಿಹಾರಕ್ಕೆ ಒಗ್ಗಟ್ಟಿನಿಂದ ಒಂದೇ ವೇದಿಕೆಗೆ ಬರಬೇಕಾಗಿದೆ ಎಂದ ಅವರು. ದೆಹಲಿಗೆ ಹೋಗಲು ಯಾವ ಮಾರ್ಗ ಹಿಡಿಯಬೇಕು ಎಂಬುದರ ಬಗ್ಗೆ ಚಿಂತನೆಗಳು ನಡೆಯಬೇಕು ಅದಕ್ಕಾಗಿ ಒಗ್ಗಟ್ಟು ಬೇಕೆಂದು ಮಾರ್ಮಿಕವಾಗಿ ನುಡಿದರು.
ಕಾಲ ಬದಲಾಗಿದೆ, ಕಾಲಕ್ಕೆ ತಕ್ಕಂತೆ ಬದಲಾವಣೆ ತಂದುಕೊಳ್ಳಬೇಕು, ಶಿಕ್ಷಣ ಇಲ್ಲದೇ ಬದುಕು ಸಾಗಿಸುವ ಕಾಲ ಇಲ್ಲ. ಶಿಕ್ಷಣಕ್ಕೆ ಬಹಳ ಮಹತ್ವವಿದೆ, ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಂಡು ಮುಖ್ಯವಾಹಿನಿಗೆ ಬರಬೇಕು, ದಲಿತರು ಮುಸ್ಲಿಂರು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ತಿಳಿಸಿದರು.
ಟಿಪು ಸುಲ್ತಾನರ ಆಡಳಿತ, ಜಾರಿಗೆ ತಂದ ಕಾನೂನುಗಳ ಬಗ್ಗೆ ತಿಳುವಳಿಕೆ ನೀಡುವ ಕೆಲಸವಾಗಬೇಕಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ, ದೇಶಕ್ಕಾಗಿ ಮಕ್ಕಳನ್ನು ಬಲಿ ನೀಡಿದ ಅವರ ದೇಶಭಕ್ತಿಯ ಕುರಿತು ಎಲ್ಲರಿಗೂ ಮಾಹಿತಿ ನೀಡುವ ಕೆಲಸವಾಗಬೇಕು. ಡಾ.ಅಂಬೇಡ್ಕರ, ವಿಶ್ವಗುರು ಬಸವಣ್ಣ, ನಾರಾಯಣಗುರುಗಳು, ಶಾಹೂ ಮಹಾರಾಜ ಮುಂತಾದ ಮಹಾತ್ಮರ ವಿಚಾರಧಾರೆಗಳು, ದೇಶದ ಇತಿಹಾಸವನ್ನು ತಿಳಿದುಕೊಳ್ಳಬೇಕು ಅದಕ್ಕಾಗಿ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು, ಸರ್ಕಾರದಿಂದ ಮುಸ್ಲಿಂರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ ಅವುಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಮಾತನಾಡಿ, ಸ್ವಾರ್ಥಕ್ಕಾಗಿ ದೇಶದ ಇತಿಹಾಸವನ್ನು ತಿರುಚುವ ಕೆಲಸ ನಡೆಯುತ್ತಿದೆ. ದೇಶವನ್ನು ಗಟ್ಟಿಯಾಗಿ ಕಟ್ಟಲು ಶ್ರಮಿಸಿದ ಟಿಪು ಸುಲ್ತಾನರ ಇತಿಹಾಸವನ್ನು ತಿರುಚುವ ಕೆಲಸ ನಡೆದಿದೆ, ಟಿಪು ಸುಲ್ತಾನರು ದೇಶದ ಸ್ವಾತಂತ್ಯ್ರಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದರು ಆಗಿನ ಕಾಲದಲ್ಲೇ ರಾಕೇಟ್‌ಗಳನ್ನು ತಯಾರಿಸಿ, ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು. ಅನೇಕ ಮಠ, ಮಂದಿಗರಳನ್ನು ನಿರ್ಮಿಸಿದ್ದರು, ನಾಣ್ಯಗಳನ್ನು ಚಲಾವಣೆಗೆ ತಂದಿದ್ದರು ಅವರ ಇತಿಹಾಸದ ಕುರಿತು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ. ಡಾ.ಅಂಬೇಡ್ಕರ ಅವರು ನೀಡಿರುವ ಮತದಾನದ ಹಕ್ಕನ್ನು ಸರಿಯಾರಿ ಬಳಸಿಕೊಂಡು ನಮಗೆ ಬೇಕಾದ ನಾಯಕರನ್ನು ಆರಿಸಿ ತರಬೇಕು, ಶೇ.75ರಷ್ಟಿರುವ ದಲಿತರು, ಮುಸ್ಲಿಂರು ಅಧಿಕಾರ ನಡೆಸುವಂತಾಬೇಕು, ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು, ಎಂದರು.
ಮಾಜಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ನರೇಗಾ ಯೋಜನೆಯಲ್ಲಿದ್ದ ರಾಷ್ಟ್ರಪೀತ ಮಹತ್ಮಾಗಾಂಧಿಜಿಯವರ ಹೆಸರನ್ನು ತೆಗೆಯುವ ಕೆಲಸ ಮಾಡಿದ್ದಾರೆ ಆದರೆ ದೇಶದ ಜನರ ಮನಸ್ಸಿನಲ್ಲಿರುವ ಅವರ ಚಿಂತನೆಗಳನ್ನು ತೆಗೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ದೇಶವನ್ನು ಸರ್ವಜನಾಂಗದ ಶಾಂತಿಯ ತೊಟ ಮಾಡಲು ಶ್ರಮಿಸುತ್ತಿದೆ ಯಾರೂ ಭಯ ಪಡುವ ಅಗತ್ಯವಿಲ್ಲ. ಎಲ್ಲರೂ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವ ಮೂಲಕ ಮುಖ್ಯವಾಗಹಿನಿಗೆ ಬರಬೇಕಾದ ಅವಶ್ಯಕತೆ ಇದೆ ಎಂದರು.
ಹಾವೇರಿಯ ಅಲ್ಲಮಪ್ರಭು ಅಹಿಂದ ಪೀಠದ ಮಹೇಶ್ವರಾನಂದ ಸ್ವಾಮಿಜಿ ಮಾತನಾಡಿ, ದಲಿತರು, ಓಬಿಸಿಗಳು, ಮುಸ್ಲಿಂಮರು ಸೇರಿ ಶೇ.97 ಜನರಿದ್ದರೂ ಅಧಿಕಾರ ನಮ್ಮ ಬಳಿ ಇಲ್ಲವಾಗಿದೆ. ಅತ್ಯಂತ ಕಡಿಮೆ ಜನ ಸಂಖ್ಯೆಯ ಜನರು ನಮ್ಮನ್ನು ಆಳುತ್ತಿದ್ದಾರೆ. ಎಲ್ಲ ಹಿಂದುಳಿದ ಸಮಾಜಗಳು ಒಗ್ಗಟ್ಟಾಗಬೇಕು, ದೇಶವನ್ನು ಹಾಳು ಮಾಡಲು ಹೊರಟಿರುವ ಅಧಿಕಾರದಲ್ಲಿರುವರ ವಿರುದ್ಧ ಒಗ್ಗಟ್ಟಾಗಬೇಕು, ಅವರನ್ನು ಯಹೂದಿಗಳು ಎಂದು ಸಂಭೋಧಿಸುತ್ತೇನೆ. ರಾಜ್ಯದಲ್ಲಿ ಕೋಟಿ ಜನರಿರುವ ಮುಸ್ಲಿಂರ 30 ಶಾಸಕರಿರಬೇಕು, ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪು ಸುಲ್ತಾನರ ಹೆಸರಿಡಬೇಕು. ನಟ ಶಾರೂಖ ಖಾನ ಟಿಪು ಸುಲ್ತಾನರ ಸಿನೆಮಾ ಮಾಡಬೇಕೆಂದು ಸಲಹೆ ನೀಡಿದರು.
ಎಐಎಂಐಎಂ ಪಕ್ಷದ ರಾಜ್ಯಾಧ್ಯಕ್ಷ ಲತೀಫ ಖಾನ ಪಠಾಣ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಟಿಪ್ಪು ಸುಲ್ತಾನ ವಿಶ್ವ ವಿದ್ಯಾಲಯ ನಿರ್ಮಿಸಬೇಕು ಎಂದು ಒತ್ತಾಯಿಸಿದರು.
ಬಿಹಾರದ ಮೌಲಾನಾ ಅಬ್ದುಲ್ಲಾಸಾಲೀಂಕಮರ ಚತುರ್ವೇದಿ, ಉತ್ತರ್ರದೇಶದ ಹಜರತ ಪೀರ ಸೈಯದ ಕಾಸಿಂ ಅಶ್ರಫ, ಬಾಗಲಕೊಟೆಯ ಹಜರತ ಮೌಲಾನಾ ಮೊಹಸೀನಅಹಮದ್,ಕಾರಿ ಸಮಿಉಲ್ಲಾ ಖಾದ್ರಿ ಆಶಿರ್ವಚನ ನೀಡಿದರು.
ಓಲೇಮಠದ ಆನಂದ ದೇವರು, ರುದ್ರಾವಧೂತ ಮಠದ ಸಹಜಾನಂದ ಶ್ರೀಗಳು ಸಾನ್ನಿಧ್ಯವಹಿಸಿದ್ದರು. ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಹುಲ ಕಲೂತಿ, ಸುಶೀಲಕುಮಾರ ಬೆಳಗಲಿ, ರಾಜು ಗಸ್ತಿ, ರಿಯಾಜ ಅವಟಿ, ರಫಿಕ್ ಬಾರಿಗಡ್ಡಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅನ್ವರ ಮೋಮಿನ, ಈಶ್ವರ ವಾಳೆಣ್ಣವರ, ರವಿ ಯಡಹಳ್ಳಿ, ವರ್ದಮಾನ ನ್ಯಾಮಗೌಡ, ದಾನೇಶ ಘಾಟಗೆ, ಸಮೀರ ಕಂಗನೊಳ್ಳಿ, ಅಲ್ತಾಫ ಸಗರ, ಅಬ್ದುಲ್‌ಸಾಬ ಜಮಾದಾರ, ಯಾಸೀನ ಲೋದಿ, ಅಬುಬಕರ ಕುಡಚಿ, ಸೇರಿದಂತೆ ಸಮಿತಿ ಹಾಗೂ ಸಲಹಾ ಸಮಿತಿಯ ಸದಸ್ಯರು ವೇದಿಕೆಯಲ್ಲಿದ್ದರು.
ಸಮಿತಿಯ ಅಧ್ಯಕ್ಷ ನಜೀರ ಕಂಗನೊಳ್ಳಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಡಾ. ತೌಫಿಕ್ ಪಾರ್ಥನಳ್ಳಿ ಮಾನಾಡಿದರು. ಶ್ರೀನಿವಾಸ ಕಟ್ಟಿಮನಿ, ಮಲ್ಲಿಕಾರ್ಜುನ ಮಠ ನಿರೂಪಿಸಿದರು.
ಸರ್ವಧರ್ಮ ಸಮ್ಮೆಳನದಲ್ಲಿ ಭಾಗವಹಿಸಿದ್ದ ಮಹೇಶ್ವರಾನಂದ ಸ್ವಾಮೀಜಿ ಕಲಮಾ ಹೇಳಿ , ಉತ್ತರ್ರದೇಶದ ಹಜರತ ಪೀರ ಸೈಯದ ಕಾಸಿಂ ಅಶ್ರಫ ಅವರು ಸಂಸ್ಕೃತ ಶ್ಲೋಕ ಭಗವದ್ಗಿತೆಯಲ್ಲಿನ ಶ್ಲೋಕಗಳನ್ನು ಹೇಳಿ ಎಲ್ಲರ ಗಮನ ಸೆಳೆದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 