ನಾಳೆ ಗದಗ ಜಿಲ್ಲಾಡಳಿತದಿಂದ ಡಂಬಳ ಗ್ರಾಮವಾಸ್ತವ್ಯ ಕಾರ್ಯಕ್ರಮ

ಗದಗ :  ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ಅವರು ಮುಂಡರಗಿ ತಾಲೂಕಿನ ಡಂಬಳದಲ್ಲಿ ಗ್ರಾಮವಾಸ್ತವ್ಯ ಮಾಡುವರು. ಅಂದು ಸಂಜೆ 5ಗಂಟೆಗೆ ಡಂಬಳಕ್ಕೆ ಆಗಮಿಸಿ ಗ್ರಾಮಸ್ಥರ ಕುಂದುಕೊರತೆ, ಸಾರ್ವಜನಿಕ ಅಹವಾಲು ಸ್ವೀಕರಿಸುವರು. ಗ್ರಾಮ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾರ್ಯಗಳ ಹಾಗೂ ಸಾರ್ವಜನಿಕ ಮೂಲಭೂತ ಸೌಕರ್ಯಗಳ ಕುರಿತಂತೆ ಸ್ಥಳಗಳಿಗೆ ಭೇಟಿ ನೀಡಿ ಅವಲೋಕನ ನಡೆಸುವರು.

     ಗದಗ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರ ಅಧ್ಯಕ್ಷತೆಯಲ್ಲಿ ಈ ಕುರಿತ ಪೂರ್ವಭಾವಿ ಸಭೆ ಜರುಗಿತು. ಕಂದಾಯ, ಗ್ರಾಮ ಪಂಚಾಯತ, ಕೃಷಿ, ತೋಟಗಾರಿಕೆ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಹೆಸ್ಕಾಂ, ಗ್ರಾಮೀಣ ನೀರು ಪೂರೈಕೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳು ಸಭೆಯಲ್ಲಿ ಭಾಗವಹಿಸಿದ್ದರು.

     ಜನರಿಗೆ ಅದರಲ್ಲೂ ಗ್ರಾಮಸ್ಥರಿಗೆ ತ್ವರಿತವಾಗಿ ನಿಗದಿತ ಸಮಯದಲ್ಲಿ ಸಮಸ್ಯೆಗಳ ಪರಿಹಾರ ಒದಗಿಸುವ ರಾಜ್ಯ ಸಕರ್ಾರದ ಆಶಯ ಗ್ರಾಮ ವಾಸ್ತವ್ಯದ ಮುಖ್ಯ ಉದ್ದೇಶವಾಗಿದೆ. ಜನರ ತೊಂದರೆಗಳನ್ನು ನಿವಾರಿಸುವದು ನಮ್ಮೆಲ್ಲರ ಕರ್ತವ್ಯವಾಗಿದ್ದು ಪ್ರತಿಯೊಬ್ಬ ಅಧಿಕಾರಿ ಸಿಬ್ಬಂದಗಿಳು ಜನ ಸ್ನೇಹಿಯಾಗಿ ಕಾರ್ಯನಿರ್ವಹಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳು ನುಡಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಪಿ.ಎಸ್.ಮಂಜುನಾತ, ಮುಂಡರಗಿ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟರ, ಮುಂಡರಗಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸದ್ದರು.